Job 42:15 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೋಬನ ಹೆಣ್ಣುಮಕ್ಕಳು ಇಡೀ ದೇಶದಲ್ಲೇ ಅತ್ಯಂತ ಸೌಂದರ್ಯವುಳ್ಳ ಸ್ತ್ರೀಯರಾಗಿದ್ದರು. ಯೋಬನು ತನ್ನ ಗಂಡುಮಕ್ಕಳಿಗೆ ಆಸ್ತಿಯನ್ನು ಕೊಟ್ಟಂತೆ ತನ್ನ ಹೆಣ್ಣುಮಕ್ಕಳಿಗೂ ಕೊಟ್ಟನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೋಬನ ಮಕ್ಕಳಷ್ಟು ಸುಂದರಸ್ತ್ರೀಯರು ಆ ದೇಶದಲ್ಲಿ ಎಲ್ಲಿಯೂ ಸಿಕ್ಕುತ್ತಿರಲಿಲ್ಲ. ತಂದೆಯು ಅಣ್ಣತಮ್ಮಂದಿರಿಗೆ ಕೊಟ್ಟ ಹಾಗೆ ಅವರಿಗೂ ಸ್ವತ್ತನ್ನು ಹಂಚಿದನು.
Kannada BSI Bible 2016
ಯೋಬನ ಕುಮಾರ್ತೆಯರ ಹಾಗೆ ಸೌಂದರ್ಯವತಿಯರಾದ ಸ್ತ್ರೀಯರು ದೇಶದಲ್ಲೆಲ್ಲಾ ಕಾಣಲಿಲ್ಲ; ಅವರ ತಂದೆ ಅವರ ಸಹೋದರರ ಮಧ್ಯದಲ್ಲಿ ಅವರಿಗೆ ಬಾಧ್ಯತೆಯನ್ನು ಕೊಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೋಬನ ಮಕ್ಕಳಷ್ಟು ಸುಂದರ ಸ್ತ್ರೀಯರು ಆ ದೇಶದಲ್ಲಿ ಎಲ್ಲಿಯೂ ಸಿಕ್ಕುತ್ತಿರಲಿಲ್ಲ. ತಂದೆಯು ಅಣ್ಣತಮ್ಮಂದಿರಿಗೆ ಕೊಟ್ಟ ಹಾಗೆ ಅವರಿಗೂ ಸ್ವಾಸ್ತ್ಯವನ್ನು ಹಂಚಿದನು.
Kannada Bible (KNCL) BSI 2016
ಯೋಬನ ಮಕ್ಕಳಷ್ಟು ಸುಂದರವಾದ ಹೆಣ್ಣುಗಳು ಆ ನಾಡಿನಲ್ಲೆಲ್ಲೂ ಸಿಕ್ಕುತ್ತಿರಲಿಲ್ಲ. ಅವರ ತಂದೆ, ಅವರ ಅಣ್ಣತಮ್ಮಂದಿರಿಗೆ ಕೊಟ್ಟ ಹಾಗೆ ಅವರಿಗೂ ಸೊತ್ತನ್ನು ಹಂಚಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೋಬನ ಪುತ್ರಿಯರ ಹಾಗೆ ಸೌಂದರ್ಯವತಿಯರು ದೇಶದಲ್ಲೆಲ್ಲೂ ಇರಲಿಲ್ಲ. ಅವರ ತಂದೆ ಅವರ ಅಣ್ಣತಮ್ಮಂದಿರಿಗೆ ಕೊಟ್ಟಹಾಗೆ ಅವರಿಗೂ ಸೊತ್ತನ್ನು ಹಂಚಿದನು.