Job 42:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಯೆಹೋವನೇ, ನೀನು ಪ್ರತಿಯೊಂದನ್ನೂ ಮಾಡಬಲ್ಲೆ ಎಂದು ನನಗೆ ಗೊತ್ತಿದೆ. ನೀನು ಮಾಡಿದ ಆಲೋಚನೆಗಳನ್ನು ಯಾವುದೂ ಬದಲಿಸಲಾರದು; ಯಾವುದೂ ನಿಲ್ಲಿಸಲಾರದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನೀನು ಸಕಲ ಕಾರ್ಯಗಳನ್ನು ನಡೆಸಬಲ್ಲೆಯೆಂತಲೂ, ಯಾವ ಸಂಕಲ್ಪವೂ ನಿನಗೆ ಅಸಾಧ್ಯವಲ್ಲವೆಂತಲೂ ತಿಳಿದುಕೊಂಡೇ ಇದ್ದೇನೆ.
Kannada BSI Bible 2016
ನಿನಗೆ ಎಲ್ಲಾ ಸಾಧ್ಯವಾಗಿದೆ; ನಿನಗೆ ಯಾವ ಆಲೋಚನೆಯೂ ತಡೆಯಲ್ಪಡುವದಿಲ್ಲವೆಂದು ತಿಳಿದಿದ್ದೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನು ಸಕಲಕಾರ್ಯಗಳನ್ನು ನಡಿಸಬಲ್ಲಿಯೆಂತಲೂ ಯಾವ ಸಂಕಲ್ಪವೂ ನಿನಗೆ ಅಸಾಧ್ಯವಲ್ಲವೆಂತಲೂ ತಿಳಿದುಕೊಂಡೇ ಇದ್ದೇನೆ.
Kannada Bible (KNCL) BSI 2016
“ತಾವು ಎಲ್ಲಾ ಕಾರ್ಯಗಳನು ನಡೆಸಲು ಶಕ್ತರೆಂದು ನಾನು ಬಲ್ಲೆ ಯಾವ ಯೋಜನೆಯು ನಿಮಗೆ ಅಸಾಧ್ಯವಿಲ್ಲವೆಂದು ನಾನು ಅರಿತಿರುವೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ತಮಗೆ ಎಲ್ಲಾ ಕಾರ್ಯಗಳನ್ನು ಮಾಡಲು ಸಾಧ್ಯ ಎಂದು ನಾನು ಬಲ್ಲೆ; ತಮ್ಮ ಯಾವ ಉದ್ದೇಶವನ್ನೂ ಅಡ್ಡಿಮಾಡಲು ಸಾಧ್ಯವಿಲ್ಲ ಎಂಬುದನ್ನು ಸಹ ತಿಳಿದಿದ್ದೇನೆ.