Job 5:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದೇವರು ಹೀನಸ್ಥಿತಿಯಲ್ಲಿರುವವರನ್ನು ಉನ್ನತಸ್ಥಿತಿಗೆ ಏರಿಸುವನು. ವ್ಯಥೆಯಿಂದಿರುವವರನ್ನು ಸಂತೋಷಗೊಳಿಸುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀನಸ್ಥಿತಿಯವರನ್ನು ಉನ್ನತಸ್ಥಿತಿಗೆ ಏರಿಸಿ, ದುಃಖಿಸುವವರನ್ನು ಸುರಕ್ಷಿತ ಸ್ಥಳಕ್ಕೆ ಕರೆತರುತ್ತಾನೆ.
Kannada BSI Bible 2016
ಹೀಗೆ ತಗ್ಗಿದವರನ್ನು ಉನ್ನತದಲ್ಲಿಡುತ್ತಾನೆ. ದುಃಖವುಳ್ಳವರು ರಕ್ಷಣೆಗೆ ಎತ್ತ ಲ್ಪಡುತ್ತಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀನಸ್ಥಿತಿಯವರನ್ನು ಉನ್ನತಸ್ಥಿತಿಗೆ ಏರಿಸಿ ದುಃಖಿಸುವವರನ್ನು ನಿರಪಾಯಸ್ಥಳಕ್ಕೆ ಹತ್ತಿಸುತ್ತಾನೆ.
Kannada Bible (KNCL) BSI 2016
ಉನ್ನತಿಗೇರಿಸುತ್ತಾನೆ ದೀನದಲಿತರನು ಸುರಕ್ಷತೆಗೊಯ್ಯುತ್ತಾನೆ ದುಃಖಿತರನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇವರು ತಗ್ಗಿದವರನ್ನು ಉನ್ನತದಲ್ಲಿಡುತ್ತಾರೆ; ದುಃಖವುಳ್ಳವರನ್ನು ಭದ್ರತೆಗೆ ಒಯ್ಯುತ್ತಾರೆ.