Job 6:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ನನಗೆ ಆದರಣೆಯಾಗುವುದು. ಮಿತಿಯಿಲ್ಲದ ಯಾತನೆಯಲ್ಲಿಯೂ ಉಲ್ಲಾಸಿಸುವೆನು; ಪವಿತ್ರವಾಗಿರುವಾತನ ಆಜ್ಞೆಗಳಿಗೆ ನಾನು ಅವಿಧೇಯನಾಗಲೇ ಇಲ್ಲ.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ನಾನು ಆದರಣೆ ಹೊಂದಿ ಮಿತಿಯಿಲ್ಲದ ಯಾತನೆಯಲ್ಲಿಯೂ ಉಲ್ಲಾಸಿಸುವೆನು. ಪರಿಶುದ್ಧ ದೇವರ ಆಜ್ಞೆಗಳನ್ನು ನಾನು ತೊರೆದುಬಿಟ್ಟವನಲ್ಲ.
Kannada BSI Bible 2016
ಹೀಗಾ ದರೆ ನನಗೆ ಇನ್ನೂ ಆದರಣೆ ಇರುವುದು; ಹೌದು, ನಾನು ದುಃಖದಲ್ಲಿ ನನ್ನನ್ನು ಕಠಿಣಪಡಿಸಿಕೊಳ್ಳುವೆನು; ಯಾಕಂದರೆ ಪರಿಶುದ್ಧನ ನುಡಿಗಳನ್ನು ನಾನು ಮರೆ ಮಾಡಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ನಾನು ಆದರಣೆ ಹೊಂದಿ ವಿುತಿಯಿಲ್ಲದ ಯಾತನೆಯಲ್ಲಿಯೂ ಉಲ್ಲಾಸಿಸುವೆನು. ಸದಮಲಸ್ವಾವಿುಯ ಆಜ್ಞೆಗಳನ್ನು ನಾನು ತೊರೆದುಬಿಟ್ಟವನಲ್ಲ.
Kannada Bible (KNCL) BSI 2016
ಆಗ ನಾನು ಸಾಂತ್ವನ ಪಡೆಯುತ್ತಿದ್ದೆ ಮಿತಿಯಿಲ್ಲದ ಯಾತನೆಯಲ್ಲೂ ಆದರ ಹೊಂದುತ್ತಿದ್ದೆ. ಪರಮಪಾವನನ ಮಾತನು ಬಿಡದೆ ಅನುಸರಿಸಿದೆನಲ್ಲವೆ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹಾಗಿದ್ದರೆ, ಇದು ನನಗೆ ಆದರಣೆಯಾಗಿರುವುದು; ಪರಿಶುದ್ಧ ದೇವರ ಮಾತುಗಳನ್ನು ನನ್ನ ಅತ್ಯಂತ ಯಾತನೆಯಲ್ಲಿಯೂ ನಾನು ನಿರಾಕರಿಸಲಿಲ್ಲ; ಇದರಿಂದ ಬರುವ ಆನಂದವು ನನಗೆ ಇನ್ನೂ ಇರುವುದು.