Job 6:15 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ನನ್ನ ಸಹೋದರರಾದ ನೀವು ನಂಬಿಗಸ್ತರಲ್ಲ. ನಾನು ನಿಮ್ಮನ್ನು ಆಶ್ರಯಿಸಿಕೊಳ್ಳಲಾರೆ. ಕೆಲವೊಮ್ಮೆ ಹರಿಯುವ, ಕೆಲವೊಮ್ಮೆ ಹರಿಯದಿರುವ ತೊರೆಗಳಂತೆ ನೀವು ದ್ರೋಹಿಗಳಾಗಿದ್ದೀರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನನ್ನ ಸಹೋದರರಾದರೋ ತೊರೆಯ ಹಾಗೂ, ಪ್ರವಾಹವು ಹಾದುಹೋಗಿ ಬತ್ತಿದ ಹಳ್ಳದ ಹಾಗೂ ದ್ರೋಹಿಗಳಾಗಿದ್ದಾರೆ.
Kannada BSI Bible 2016
ನನ್ನ ಸಹೋದರರು ಹಳ್ಳದ ಹಾಗೆ ಮೋಸ ಮಾಡಿದ್ದಾರೆ; ಹಳ್ಳಗಳ ಪ್ರವಾಹದಂತೆ ಹಾದು ಹೋಗುತ್ತಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನನ್ನ ಸಹೋದರರಾದರೋ ತೊರೆಯ ಹಾಗೂ ಪ್ರವಾಹವು ಹಾದುಹೋಗಿ ಬತ್ತಿದ ಹಳ್ಳದ ಹಾಗೂ ದ್ರೋಹಿಗಳಾಗಿದ್ದಾರೆ.
Kannada Bible (KNCL) BSI 2016
ಹರಿದು ಓಡುವ ತೊರೆಯಂತೆ ಉಕ್ಕಿ ಹರಿಯುವ ಪ್ರವಾಹದಂತೆ ದ್ರೋಹವೆಸಗಿದ್ದಾರೆ ಸೋದರರು ನನಗೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ನನ್ನ ಸಹೋದರರಾದರೋ, ಉಕ್ಕಿ ಹರಿಯುವ ತೊರೆಯಂತೆಯೂ, ಬತ್ತಿದ ಹಳ್ಳದಂತೆಯೂ ಅಪನಂಬಿಗಸ್ತರಾಗಿದ್ದಾರೆ.