Job 6:29 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದ್ದರಿಂದ ಈಗ ನಿಮ್ಮ ಮನಸ್ಸನ್ನು ಬದಲಾಯಿಸಿರಿ. ಅನ್ಯಾಯಸ್ಥರಾಗಿರಬೇಡಿ. ಹೌದು, ಮತ್ತೊಮ್ಮೆ ಯೋಚಿಸಿರಿ. ನಾನೇನೂ ತಪ್ಪು ಮಾಡಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದಯವಿಟ್ಟು ನನ್ನ ವಿಚಾರಣೆಗೆ ಅನ್ಯಾಯವಾಗದಿರಲಿ; ಮತ್ತೆ ವಿಮರ್ಶೆ ಮಾಡಿರಿ. ನನ್ನ ವ್ಯಾಜ್ಯವು ನ್ಯಾಯವಾದದ್ದು.
Kannada BSI Bible 2016
ತಿರುಗಿಕೊಳ್ಳಿರಿ, ಅನ್ಯಾಯವಾಗದಿರಲಿ; ಹೌದು, ತಿರುಗಿಕೊಳ್ಳಿರಿ; ಇನ್ನು ನನ್ನ ನೀತಿಯು ಇವುಗಳಲ್ಲಿ ಇರುವದು.ನನ್ನ ನಾಲಿಗೆಯಲ್ಲಿ ಅನ್ಯಾಯ ಉಂಟೋ? ನನ್ನ ಅಂಗಳವು ಕೇಡನ್ನು ರುಚಿ ನೋಡುವದಿಲ್ಲವೋ?
Kannada BSI JV (ಕನ್ನಡ ಸತ್ಯವೇದವು J.V. (BSI))
ದಯವಿಟ್ಟು ನನ್ನ ವಿಚಾರಣೆಗೆ ತಿರುಗಿಕೊಳ್ಳಿರಿ, ಅನ್ಯಾಯವಾಗದಿರಲಿ; ಮತ್ತೆ ವಿಮರ್ಶೆಗೆ ತಿರುಗಿಕೊಳ್ಳಿರಿ. ನನ್ನ ವ್ಯಾಜ್ಯವು ನ್ಯಾಯವಾದದ್ದು.
Kannada Bible (KNCL) BSI 2016
ದಯಮಾಡಿ ಮತ್ತೆ ಆಲೋಚಿಸಿರಿ ಅನ್ಯಾಯವಾಗದಂತೆ ಮರಳಿ ವಿಮರ್ಶಿಸಿರಿ ನನ್ನ ಸತ್ಯತೆ ತಿಳಿಯುವಂತೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕರುಣೆ ತೋರಿಸಿರಿ, ಅನ್ಯಾಯವಾಗದಿರಲಿ; ಪುನಃ ಯೋಚಿಸಿರಿ, ನನ್ನ ಪ್ರಾಮಾಣಿಕತೆಯು ಪ್ರಶ್ನಿಸಲಾಗಿದೆ.