Job 7:16 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನನ್ನ ಜೀವಿತವು ನನಗೆ ಅಸಹ್ಯವಾಗಿದೆ. ಶಾಶ್ವತವಾಗಿ ಬದುಕಲು ನನಗೆ ಇಷ್ಟವಿಲ್ಲ. ನನ್ನನ್ನು ಒಬ್ಬಂಟಿಗನನ್ನಾಗಿ ಬಿಟ್ಟುಬಿಡು! ನನ್ನ ಜೀವಿತಕ್ಕೆ ಅರ್ಥವೇ ಇಲ್ಲ!
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ಬೇಸರಗೊಂಡಿದ್ದೇನೆ, ಹೀಗೆ ನಿರಂತರ ಬದುಕುವುದಕ್ಕೆ ಇಷ್ಟವಿಲ್ಲ. ನನ್ನನ್ನು ಬಿಟ್ಟುಬಿಡು; ನನ್ನ ದಿನಗಳು ಉಸಿರಿನಂತಿವೆ.
Kannada BSI Bible 2016
ನಾನು ಬೇಸರಗೊಂಡಿದ್ದೇನೆ; ನಿತ್ಯವಾಗಿ ನಾನು ಬದುಕಲೊಲ್ಲೆನು; ನನ್ನನ್ನು ಬಿಟ್ಟು ಬಿಡು; ಯಾಕಂದರೆ ನನ್ನ ದಿವಸಗಳು ವ್ಯರ್ಥವಾಗಿವೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ಬೇಸರಗೊಂಡಿದ್ದೇನೆ, ನಿತ್ಯವಾಗಿ ಬದುಕುವದಕ್ಕೆ ಇಷ್ಟವಿಲ್ಲ. ನನ್ನನ್ನು ಬಿಟ್ಟುಬಿಡು; ನನ್ನ ದಿನಗಳು ಉಸಿರಿನಂತಿವೆ.
Kannada Bible (KNCL) BSI 2016
ಬದುಕು ನನಗೆ ಬೇಸರ; ನಿರಂತರ ಬಾಳು ನನಗೆ ಅನಿಷ್ಟ ನನ್ನ ದಿನಗಳು ನಿರರ್ಥಕ, ನನ್ನ ಗೊಡವೆ ನಿನಗೆ ಬೇಕಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ನನ್ನ ಜೀವನವನ್ನು ದ್ವೇಷಿಸುತ್ತೇನೆ; ನಿರಂತರ ನಾನು ಬದುಕಲೊಲ್ಲೆನು; ನನ್ನನ್ನು ಬಿಟ್ಟುಬಿಡಿರಿ; ನನ್ನ ಬಾಳಿನ ದಿನಗಳಿಗೆ ಅರ್ಥವಿಲ್ಲ.