Job 7:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಮನುಷ್ಯನು ಉರಿಬಿಸಿಲಿನಲ್ಲಿ ಪ್ರಯಾಸಪಟ್ಟು ದುಡಿದ ಮೇಲೆ ತಂಪಾದ ನೆರಳನ್ನು ಬಯಸುವ ಗುಲಾಮನಂತಿದ್ದಾನೆ. ಮನುಷ್ಯನು, ದಿನದ ಕೂಲಿಗಾಗಿ ಕಾಯುತ್ತಿರುವ ಕೂಲಿಯವನಂತಿದ್ದಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ಸಂಜೆಯನ್ನು ಬಯಸುವ ದಾಸನಂತೆಯೂ, ಕೂಲಿಯನ್ನು ನಿರೀಕ್ಷಿಸುವ ಆಳಿನಂತೆಯೂ ಇದ್ದೇನೆ.
Kannada BSI Bible 2016
ಸೇವಕನು ನೆರಳನ್ನು ಅಪೇಕ್ಷಿಸುವ ಪ್ರಕಾರವೂ ಕೂಲಿಯವನು ತನ್ನ ಕೂಲಿಯನ್ನು ಕೋರುವ ಪ್ರಕಾ ರವೂ
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ಸಂಜೆಯನ್ನು ಬಯಸುವ ದಾಸನಂತೆಯೂ ಕೂಲಿಯನ್ನು ನಿರೀಕ್ಷಿಸುವ ಆಳಿನಂತೆಯೂ ಇದ್ದೇನೆ.
Kannada Bible (KNCL) BSI 2016
ನಾನಿರುವೆ ಸಂಜೆಯನು ಬಯಸುವ ದಾಸನಂತೆ ಕೂಲಿಯನು ನಿರೀಕ್ಷಿಸುವ ಕೂಲಿಯಾಳಿನಂತೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಗುಲಾಮನು ಸಾಯಂಕಾಲದ ನೆರಳನ್ನು ಅಪೇಕ್ಷಿಸುವ ಪ್ರಕಾರವೂ, ನಾನು ಕೂಲಿಯವನು ತನ್ನ ಕೂಲಿಯನ್ನು ಕೋರುವ ಪ್ರಕಾರವೂ ಇದ್ದೇನೆ.