Job 7:20 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಮನುಷ್ಯನನ್ನು ಗಮನಿಸುವವನೇ, ನಾನು ಪಾಪ ಮಾಡಿದ್ದರೆ, ಅದರಿಂದ ನಿನಗೇನಾಯಿತು? ದೇವರೇ, ನೀನು ನನ್ನನ್ನು ಗುರಿಯನ್ನಾಗಿ ಮಾಡಿಕೊಂಡದ್ದೇಕೆ? ನಾನು ನಿನಗೆ ಸಮಸ್ಯೆಯಾದೆನೇ?
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮನುಷ್ಯರ ಮೇಲೆ ಕಾವಲಿಡುವವನೇ, ನಾನು ಪಾಪ ಮಾಡಿದ್ದರೂ ನನ್ನ ಕೃತ್ಯದಿಂದ ನಿನಗೆ ಏನಾಯಿತು? ನನ್ನನ್ನು ಶಿಕ್ಷೆಗೆ ಗುರಿಮಾಡಿಕೊಂಡದ್ದೇಕೆ? ನನಗೆ ನಾನೇ ಭಾರವಾಗಿದ್ದೇನೆ.
Kannada BSI Bible 2016
ನಾನು ಪಾಪ ಮಾಡಿದ್ದೇನೆ; ಓ ಮನುಷ್ಯರನ್ನು ಕಾಯುವವನೇ, ನಾನು ನಿನಗೆ ಏನು ಮಾಡಲಿ? ನನಗೆ ನಾನೇ ಭಾರವಾಗುವ ಹಾಗೆ ನನ್ನನ್ನು ನಿನಗೆ ಗುರಿಯಾಗಿ ಇಟ್ಟು ಕೊಳ್ಳುವದು ಯಾಕೆ?ಯಾಕೆ ನನ್ನ ದ್ರೋಹವನ್ನು ಮನ್ನಿಸುವದಿಲ್ಲ? ನನ್ನ ಅಕ್ರಮವನ್ನು ಪರಿಹರಿಸುವ ದಿಲ್ಲವೇಕೆ? ಈಗ ಧೂಳಿನಲ್ಲಿ ಮಲಗಿಕೊಳ್ಳುವೆನು; ನೀನು ಮುಂಜಾವಿನಲ್ಲಿ ನನ್ನನ್ನು ಹುಡುಕಿದರೆ ನಾನು ಇರುವದಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಮನುಷ್ಯರ ಮೇಲೆ ಕಾವಲಿಡುವವನೇ, ನಾನು ಪಾಪಮಾಡಿದ್ದರೂ ನನ್ನ ಕೃತ್ಯದಿಂದ ನಿನಗೆ ಏನಾಯಿತು? ನನ್ನನ್ನು ಗುರಿಮಾಡಿಕೊಂಡದ್ದೇಕೆ? ನನಗೆ ನಾನೇ ಭಾರವಾಗಿದ್ದೇನೆ.
Kannada Bible (KNCL) BSI 2016
ನರಮಾನವರ ಮೇಲೆ ಬೆಂಗಾವಲಿರುವವನೇ, ಭಾರವಾಗಿರುವೆನು ನನಗೆ ನಾನೇ. ನಾನು ಪಾಪಮಾಡಿದ್ದಾದರೂ ನಿನಗೇನು ಮಾಡಿದೆ? ನನ್ನನ್ನೇಕೆ ನಿನ್ನ ಹೊಡೆತಕ್ಕೆ ಗುರಿಪಡಿಸಿದೆ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮನುಷ್ಯರನ್ನು ಕಾಯುವವರೇ, ನಾನು ಪಾಪಮಾಡಿದ್ದರೆ, ನಾವು ಮಾಡುವ ಪ್ರತಿಯೊಂದನ್ನೂ ನೋಡುವವರೇ, ನಾನು ನಿಮಗೆ ಏನು ಮಾಡಿದೆ? ನಾನು ನಿಮಗೆ ಭಾರವಾಗಿದ್ದೇನೋ? ನನ್ನನ್ನು ನಿಮ್ಮ ಗುರಿಯಾಗಿ ಇಟ್ಟುಕೊಳ್ಳುವುದು ಏಕೆ?