Job 7:21 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನೀನು ನನ್ನ ತಪ್ಪುಗಳನ್ನು ಮನ್ನಿಸಬಾರದೇಕೆ? ನನ್ನ ಪಾಪಗಳನ್ನು ಕ್ಷಮಿಸಬಾರದೇಕೆ? ನಾನು ಬೇಗನೆ ಸತ್ತು ಸಮಾಧಿಯಲ್ಲಿರುವೆನು. ಆಮೇಲೆ ನೀನು ನನಗಾಗಿ ಹುಡುಕುವೆ, ಆದರೆ ನಾನು ಅಷ್ಟರಲ್ಲೇ ಹೊರಟುಹೋಗಿರುವೆನು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀನು ನನ್ನ ಅಪರಾಧವನ್ನು ಕ್ಷಮಿಸಿ ನನ್ನ ದೋಷವನ್ನು ಏಕೆ ಪರಿಹರಿಸುವುದಿಲ್ಲ? ನಾನು ಈಗ ಮಣ್ಣಿನಲ್ಲಿ ಮಲಗಿಕೊಳ್ಳುವೆನು; ನೀನು ನನ್ನನ್ನು ಹುಡುಕುವಾಗ ನಾನು ಇಲ್ಲದೆ ಹೋಗಿರುವೆನು.
Kannada BSI Bible 2016
ಯಾಕೆ ನನ್ನ ದ್ರೋಹವನ್ನು ಮನ್ನಿಸುವದಿಲ್ಲ? ನನ್ನ ಅಕ್ರಮವನ್ನು ಪರಿಹರಿಸುವ ದಿಲ್ಲವೇಕೆ? ಈಗ ಧೂಳಿನಲ್ಲಿ ಮಲಗಿಕೊಳ್ಳುವೆನು; ನೀನು ಮುಂಜಾವಿನಲ್ಲಿ ನನ್ನನ್ನು ಹುಡುಕಿದರೆ ನಾನು ಇರುವದಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನು ನನ್ನ ಅಪರಾಧವನ್ನು ಕ್ಷವಿುಸಿ ನನ್ನ ದೋಷವನ್ನು ಏಕೆ ಪರಿಹರಿಸುವದಿಲ್ಲ? ನಾನು ಈಗ ಮಣ್ಣಿನಲ್ಲಿ ಮಲಗಿಕೊಳ್ಳುವೆನು; ನೀನು ನನ್ನನ್ನು ಹುಡುಕುವಾಗ ನಾನು ಇಲ್ಲದೆ ಹೋಗಿರುವೆನು.
Kannada Bible (KNCL) BSI 2016
ನನ್ನ ಅಪರಾದವನ್ನು ನೀನು ಕ್ಷಮಿಸಬಾರದೆ? ನನ್ನ ದೋಷವನ್ನು ನೀನು ಪರಿಹರಿಸಬಾರದೆ? ಮಣ್ಣಿನೊಳಗೆ ಬಿದ್ದಿರುವೆ ನಾನು ಈಗ ನಾನು ಇಲ್ಲವಾಗಿರುವೆ ನೀ ಹುಡುಕುವಾಗ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀವು ನನ್ನ ಅಪರಾಧವನ್ನು ಪರಿಹರಿಸಬಾರದೇ? ನನ್ನ ಪಾಪವನ್ನು ಕ್ಷಮಿಸಬಾರದೇ? ನಾನು ಬೇಗ ಮಣ್ಣಿಗೆ ಸೇರಿಬಿಡುವೆನು; ನೀವು ನನ್ನನ್ನು ಹುಡುಕಿದರೆ ನಾನು ಇರುವುದಿಲ್ಲ.”