Job 9:24 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದುಷ್ಟನು ಭೂಮಿಯನ್ನು ಆಕ್ರಮಿಸಿಕೊಂಡಾಗ, ದೇವರು ಅದನ್ನು ನ್ಯಾಯಾಧಿಪತಿಗಳಿಗೆ ಮರೆಮಾಡುವನೇ? ಇದು ಸತ್ಯವಾಗಿದ್ದರೆ, ಇದನ್ನು ದೇವರಲ್ಲದೆ ಇನ್ಯಾರು ಮಾಡಿದರು?
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಭೂಲೋಕವು ದುಷ್ಟರ ಕೈ ಸೇರಿದೆ; ಲೋಕದ ನ್ಯಾಯಾಧಿಪತಿಗಳ ಮುಖಗಳಿಗೆ ಮುಸುಕು ಹಾಕಿದ್ದಾನೆ. ಇದನ್ನು ಮಾಡಿದವನು ಆತನಲ್ಲದೆ ಮತ್ತೆ ಯಾರು?
Kannada BSI Bible 2016
ಲೋಕವು ಕೆಟ್ಟವನ ಕೈಯಲ್ಲಿ ಕೊಡಲ್ಪಟ್ಟಿದೆ. ಅದರ ನ್ಯಾಯಾಧಿಪತಿಗಳ ಮುಖಗ ಳನ್ನು ಆತನು ಮುಚ್ಚುತ್ತಾನೆ. ಇಲ್ಲವಾದರೆ ಆತನು ಎಲ್ಲಿರುತ್ತಿದ್ದನೋ? ಯಾರಾಗಿರುತ್ತಿದ್ದನೋ?
Kannada BSI JV (ಕನ್ನಡ ಸತ್ಯವೇದವು J.V. (BSI))
ಭೂಲೋಕವು ದುಷ್ಟರ ಕೈ ಸೇರಿದೆ; ಲೋಕದ ನ್ಯಾಯಾಧಿಪತಿಗಳ ಮುಖಗಳಿಗೆ ಮುಸುಕು ಹಾಕಿದ್ದಾನೆ. ಇದನ್ನು ಮಾಡಿದವನು ಆತನಲ್ಲದೆ ಮತ್ತೆ ಯಾರು?
Kannada Bible (KNCL) BSI 2016
ದೇಶವು ದುರುಳರ ಕೈವಶವಾಗಿದ್ದರೂ ನ್ಯಾಯಾಧೀಶರ ಮುಖಕ್ಕೆ ಮುಸುಕುಹಾಕುತ್ತಾನೆ. ಇದನ್ನು ಮಾಡುವವರು ದೇವರಲ್ಲದೆ ಮತ್ತೆ ಯಾರು?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಲೋಕವು ಕೆಟ್ಟವರ ಕೈವಶವಾಗಿದೆ; ನ್ಯಾಯಾಧಿಪತಿಗಳ ಮುಖಕ್ಕೆ ಮುಸುಕುಹಾಕಲಾಗಿದೆ; ಇದನ್ನು ಅನುಮತಿಸಿದವರು ದೇವರಲ್ಲದೆ ಮತ್ತೆ ಯಾರು?