Job 9:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದೇವರ ಜ್ಞಾನವು ಅಗಾಧವಾದದ್ದು; ಆತನ ಶಕ್ತಿಯು ಮಹತ್ವವಾದದ್ದು. ಯಾವನೂ ದೇವರಿಗೆ ವಿರೋಧವಾಗಿ ಜಯಗಳಿಸಲಾರನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೇವರ ಹೃದಯವು ವಿವೇಕವುಳ್ಳದ್ದು, ಆತನ ಶಕ್ತಿಯು ಪ್ರಬಲವಾದದ್ದು. ಆತನ ವಿರುದ್ಧವಾಗಿ ಮನಸ್ಸು ಕಠಿಣಮಾಡಿಕೊಂಡವನು ಸಾರ್ಥಕನಾದದ್ದುಂಟೇ?
Kannada BSI Bible 2016
ಆತನು ಹೃದಯದಲ್ಲಿ ಜ್ಞಾನಿಯೂ ಬಲದಲ್ಲಿ ಶಕ್ತನೂ ಆಗಿದ್ದಾನೆ; ಆತನಿಗೆ ವಿರೋಧವಾಗಿ ತನ್ನನ್ನು ಕಠಿಣಪಡಿಸಿಕೊಂಡು ವೃದ್ಧಿಯಾಗುವವನು ಯಾರು?
Kannada BSI JV (ಕನ್ನಡ ಸತ್ಯವೇದವು J.V. (BSI))
ದೇವರ ಹೃದಯವು ವಿವೇಕವುಳ್ಳದ್ದು, ಆತನ ಶಕ್ತಿಯು ಪ್ರಬಲವಾದದ್ದು; ಆತನಿಗೆ ವಿರುದ್ಧವಾಗಿ ಮನಸ್ಸು ಕಠಿಣಮಾಡಿಕೊಂಡವನು ಸಾರ್ಥಕನಾದದ್ದುಂಟೇ?
Kannada Bible (KNCL) BSI 2016
ದೇವರ ಹೃದಯ ಧೀಮಂತ, ಅವರ ಶಕ್ತಿ ಅತುಳ ಆತನನ್ನು ಪ್ರತಿಭಟಿಸಿ ಜಯಗಳಿಸಿದವನಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇವರ ಜ್ಞಾನವು ಆಳವಾದದ್ದು, ಶಕ್ತಿಯಲ್ಲಿ ದೇವರು ಪ್ರಬಲರೂ ಆಗಿದ್ದಾರೆ; ದೇವರ ವಿರೋಧವಾಗಿ ತನ್ನನ್ನು ಕಠಿಣಪಡಿಸಿಕೊಂಡು ವೃದ್ಧಿಯಾಗುವವನು ಯಾರು?