Joel 2:10 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವರ ಮುಂದೆ ಭೂಮಿಯೂ ಆಕಾಶವೂ ನಡುಗುವುದು; ಸೂರ್ಯಚಂದ್ರರು ಕಪ್ಪಾಗಿಹೋಗುವರು; ನಕ್ಷತ್ರಗಳು ಹೊಳಪನ್ನು ಕಳೆದುಕೊಳ್ಳುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವುಗಳ ಆಗಮನದಿಂದ ಭೂಮಿಯು ಕಂಪಿಸುತ್ತದೆ, ಆಕಾಶಮಂಡಲವು ನಡಗುತ್ತದೆ, ಸೂರ್ಯ ಮತ್ತು ಚಂದ್ರರು ಮಂಕಾಗುತ್ತಾರೆ, ಮತ್ತು ನಕ್ಷತ್ರಗಳು ಕಾಂತಿಗುಂದುತ್ತವೆ.
Kannada BSI Bible 2016
ಅವರ ಮುಂದೆ ಭೂಮಿಯು ನಡುಗುತ್ತದೆ; ಆಕಾಶಗಳು ಅದುರುತ್ತವೆ; ಸೂರ್ಯ ಚಂದ್ರರು ಕಪ್ಪಾಗುತ್ತವೆ; ನಕ್ಷತ್ರಗಳು ತಮ್ಮ ಪ್ರಕಾಶವನ್ನು ಮರೆ ಮಾಡುತ್ತವೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವುಗಳ ಆಗಮನದಿಂದ ಭೂವಿುಯು ಕಂಪಿಸುತ್ತದೆ, ಆಕಾಶಮಂಡಲವು ನಡುಗುತ್ತದೆ, ಸೂರ್ಯಚಂದ್ರರು ಮಂಕಾಗುತ್ತಾರೆ, ನಕ್ಷತ್ರಗಳು ಕಾಂತಿಯನ್ನು ಅಡಗಿಸಿಕೊಳ್ಳುತ್ತವೆ;
Kannada Bible (KNCL) BSI 2016
ಅವುಗಳ ಮುಂದೆ ಭೂಮಂಡಲ ಕಂಪಿಸುತ್ತದೆ, ಆಕಾಶಮಂಡಲ ನಡುಗುತ್ತದೆ. ಸೂರ್ಯಚಂದ್ರಗಳು ಮಂಕಾಗುತ್ತವೆ, ನಕ್ಷತ್ರಗಳು ಕಾಂತಿಗುಂದುತ್ತವೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವುಗಳ ಮುಂದೆ ಭೂಮಿಯು ನಡುಗುತ್ತದೆ. ಆಕಾಶಗಳು ಅದರುತ್ತವೆ. ಸೂರ್ಯ ಚಂದ್ರರು ಕಪ್ಪಾಗುತ್ತವೆ. ನಕ್ಷತ್ರಗಳು ಇನ್ನು ಮುಂದೆ ಹೊಳೆಯುವುದಿಲ್ಲ.