Joel 2:22 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅಡವಿಯಲ್ಲಿರುವ ಪ್ರಾಣಿಗಳೇ, ಭಯಪಡಬೇಡಿ. ಮರುಭೂಮಿಯು ಹುಲ್ಲುಗಾವಲಾಗುವದು. ಮರಗಳು ಹಣ್ಣುಗಳನ್ನು ಬಿಡುವವು. ಅಂಜೂರದ ಮರಗಳೂ ದ್ರಾಕ್ಷಿಬಳ್ಳಿಗಳೂ ಬಹಳ ಹಣ್ಣುಗಳನ್ನು ಬಿಡುವವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕಾಡುಮೃಗಗಳೇ ಅಂಜಬೇಡಿರಿ, ಕಾಡುಗಾವಲಲ್ಲಿ ಹುಲ್ಲು ಮೊಳೆಯುವುದು, ಮರವು ಹಣ್ಣು ಬಿಡುವುದು. ಅಂಜೂರದ ಗಿಡವೂ ದ್ರಾಕ್ಷಾಲತೆಯೂ ಸಾರವತ್ತಾಗಿ ಫಲಿಸುವವು.
Kannada BSI Bible 2016
ಹೊಲದ ಮೃಗಗಳೇ, ಭಯಪಡಬೇಡಿರಿ; ಅಡ ವಿಯ ಮೇವಿನ ಸ್ಥಳಗಳು ಮೊಳೆಯುತ್ತವೆ; ಮರಗಳು ತಮ್ಮ ಫಲವನ್ನು ಫಲಿಸುತ್ತವೆ; ಅಂಜೂರದ ಗಿಡವೂ ದ್ರಾಕ್ಷೇ ಬಳ್ಳಿಯೂ ತಮ್ಮ ಫಲವನ್ನು ಕೊಡುತ್ತವೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಭೂಜಂತುಗಳೇ, ಅಂಜಬೇಡಿರಿ; ಕಾಡಿನ ಕಾವಲಲ್ಲಿ ಹುಲ್ಲು ಮೊಳೆಯುವದು, ಮರವು ಹಣ್ಣುಬಿಡುವದು, ಅಂಜೂರದ ಗಿಡವೂ ದ್ರಾಕ್ಷಾಲತೆಯೂ ಸಾರವತ್ತಾಗಿ ಫಲಿಸುವವು.
Kannada Bible (KNCL) BSI 2016
ಭೂಜಂತುಗಳೇ ಅಂಜಬೇಡಿ, ವನವೃಕ್ಷಗಳು ಫಲಭರಿತವಾಗಿರುವುವು; ಅಂಜೂರ, ದ್ರಾಕ್ಷಿಗಳೆಲ್ಲವೂ ತುಂಬಿ ತುಳುಕುವುವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕಾಡುಮೃಗಗಳೇ, ಭಯಪಡಬೇಡಿರಿ. ಏಕೆಂದರೆ, ಅಡವಿಯ ಮೇವಿನ ಸ್ಥಳಗಳು ಮೊಳೆಯುತ್ತವೆ. ಮರಗಳು ತಮ್ಮ ಫಲವನ್ನು ಫಲಿಸುತ್ತವೆ. ಅಂಜೂರದ ಗಿಡವೂ ದ್ರಾಕ್ಷಿ ಬಳ್ಳಿಯೂ ತಮ್ಮ ಫಲವನ್ನು ಕೊಡುತ್ತವೆ.