Joel 2:27 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇಸ್ರೇಲರೊಂದಿಗೆ ನಾನು ಇದ್ದೇನೆ ಎಂದು ನೀವು ತಿಳಿಯುವಿರಿ. ನಿಮ್ಮ ದೇವರಾದ ಯೆಹೋವನು ನಾನೇ ಎಂದು ನೀವು ತಿಳಿಯುವಿರಿ. ನನ್ನ ಹೊರತು ಬೇರೆ ದೇವರುಗಳಿಲ್ಲ. ನನ್ನ ಜನರು ಇನ್ನು ಮುಂದೆ ನಾಚಿಕೆಗೆ ಗುರಿಯಾಗುವುದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ಇಸ್ರಾಯೇಲಿನ ಮಧ್ಯದಲ್ಲಿ ನೆಲೆಯಾಗಿ ಇರುವವನು, ನಾನೇ ನಿಮ್ಮ ದೇವರಾದ ಯೆಹೋವನು, ನಾನಲ್ಲದೆ ಬೇರೆ ದೇವರು ನಿಮಗಿಲ್ಲ. ನನ್ನ ಜನರಿಗೆ ಎಂದಿಗೂ ಆಶಾಭಂಗವಾಗದು.
Kannada BSI Bible 2016
ನಾನು ಇಸ್ರಾಯೇಲಿನ ಮಧ್ಯದಲ್ಲಿ ಇದ್ದೇನೆಂದೂ ಮತ್ತೊಬ್ಬ ನಲ್ಲ, ನಾನೇ ನಿಮ್ಮ ದೇವರಾದ ಕರ್ತನಾಗಿದ್ದೇನೆಂದೂ ನೀವು ತಿಳುಕೊಳ್ಳುವಿರಿ; ನನ್ನ ಜನರು ಎಂದೆಂದಿಗೂ ನಾಚಿಕೆಪಡರು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ಇಸ್ರಾಯೇಲಿನ ಮಧ್ಯದಲ್ಲಿ ನೆಲೆಯಾಗಿದ್ದೇನೆಂತಲೂ ಅದ್ವಿತೀಯನಾದ ನಾನೇ ನಿಮ್ಮ ದೇವರಾದ ಯೆಹೋವನಾಗಿದ್ದೇನೆಂತಲೂ ನಿಮಗೆ ನಿಶ್ಚಯವಾಗುವದು; ನನ್ನ ಜನರು ಎಂದಿಗೂ ಆಶಾಭಂಗಪಡರು.
Kannada Bible (KNCL) BSI 2016
ನಾನೇ ಇಸ್ರಯೇಲಿನ ಮಧ್ಯೆ ನೆಲೆಯಾಗಿ ಇರುವವನು ನಾನೇ ನಿಮ್ಮ ಸರ್ವೇಶ್ವರನಾದ ದೇವರು; ನಾನಲ್ಲದೆ ಬೇರೆ ದೇವರು ನಿಮಗಿಲ್ಲ. ನನ್ನ ಜನರಿಗೆ ಎಂದಿಗೂ ಆಶಾಭಂಗವಾಗದು ಎಂದು ನಿಮಗೆ ಮನದಟ್ಟಾಗುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನೇ ಇಸ್ರಾಯೇಲಿನ ಮಧ್ಯೆ ನೆಲೆಯಾಗಿ ಇರುವವನು. ನಾನೇ ನಿಮ್ಮ ಯೆಹೋವ ದೇವರು, ನಾನಲ್ಲದೆ ಬೇರೆ ದೇವರು ನಿಮಗಿಲ್ಲ. ನನ್ನ ಜನರು ಎಂದಿಗೂ ನಾಚಿಕೆಪಡರು.