Joel 2:30 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಭೂಮ್ಯಾಕಾಶಗಳಲ್ಲಿ ವಿಚಿತ್ರ ಸಂಗತಿಗಳನ್ನು ನಾನು ತೋರಿಸುವೆನು. ಅಲ್ಲಿ ರಕ್ತ, ಬೆಂಕಿ ಮತ್ತು ದಟ್ಟವಾದ ಹೊಗೆಯು ಇರುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಕಾಶಗಳಲ್ಲಿ ಮತ್ತು ಭೂಮಿಯಲ್ಲಿ ಅದ್ಭುತಗಳನ್ನು ಮಾಡುವೆನು. ರಕ್ತ, ಬೆಂಕಿ, ಧೂಮಸ್ತಂಭ ಈ ಉತ್ಪಾತಗಳನ್ನು ಉಂಟುಮಾಡುವೆನು.
Kannada BSI Bible 2016
ಆಕಾಶಗಳಲ್ಲಿ ಮತ್ತು ಭೂಮಿಯಲ್ಲಿ ಅದ್ಭುತಗಳನ್ನೂ ರಕ್ತವನ್ನೂ ಬೆಂಕಿಯನ್ನೂ ಹೊಗೆಯ ಸ್ತಂಭಗಳನ್ನೂ ತೋರಿಸುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನ ಆಗಮನದ ಭಯಂಕರವಾದ ಮಹಾದಿನವು ಬರುವದಕ್ಕೆ ಮುಂಚೆ ಭೂಮ್ಯಾಕಾಶಗಳಲ್ಲಿ ರಕ್ತ ಬೆಂಕಿ ಧೂಮಸ್ತಂಭ ಈ ಉತ್ಪಾತಗಳನ್ನು ಉಂಟುಮಾಡುವೆನು;
Kannada Bible (KNCL) BSI 2016
ಭೂಮ್ಯಾಕಾಶಗಳಲ್ಲಿ ಸೂಚಕಕಾರ್ಯಗಳನ್ನು ಮಾಡುವೆನು. ರಕ್ತಧಾರೆ, ಅಗ್ನಿಪ್ರಳಯ, ಧೂಮಕೇತು ಕಾಣಿಸುವಂತೆ ಮಾಡುವೆನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಕಾಶಗಳಲ್ಲಿ ಮತ್ತು ಭೂಮಿಯಲ್ಲಿ ಅದ್ಭುತಗಳನ್ನು, ರಕ್ತ, ಬೆಂಕಿ, ಹಬೆಯನ್ನು ತೋರಿಸುವೆನು.