Joel 2:32 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ಯೆಹೋವನ ಹೆಸರನ್ನು ಹೇಳಿಕೊಳ್ಳುವವರೆಲ್ಲರೂ ರಕ್ಷಿಸಲ್ಪಡುವರು. ಚೀಯೋನ್ ಪರ್ವತದಲ್ಲಿಯೂ ಜೆರುಸಲೇಮಿನಲ್ಲಿಯೂ ರಕ್ಷಿಸಲ್ಪಟ್ಟ ಜನರಿರುವರು. ಯೆಹೋವನು ಹೇಳಿದ ಪ್ರಕಾರವೇ ಇದು ಆಗುವುದು. ಉಳಿದ ಜನರಲ್ಲಿ ಯೆಹೋವನು ಕರೆದಿರುವ ಜನರು ಸೇರಿಕೊಂಡಿರುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೂ ಯೆಹೋವನ ನಾಮವನ್ನು ಹೇಳಿಕೊಳ್ಳುವವರೆಲ್ಲರಿಗೆ ರಕ್ಷಣೆಯಾಗುವುದು. ಯೆಹೋವನು ತಿಳಿಸಿದಂತೆ ಚೀಯೋನಿನ ಪರ್ವತದಲ್ಲಿಯೂ, ಯೆರೂಸಲೇಮಿನಲ್ಲಿಯೂ ಅನೇಕರು ಉಳಿಯುವರು. ಯೆಹೋವನು ಹೇಳಿದಂತೆಯೇ, ಉಳಿದವರಲ್ಲಿ ಯೆಹೋವನಿಂದ ಕರೆಯಲ್ಪಟ್ಟವರು ಬದುಕುವರು.”
Kannada BSI Bible 2016
ಆಗುವದೇನಂದರೆ--ಕರ್ತನ ಹೆಸರನ್ನು ಹೇಳಿ ಕೊಳ್ಳುವವರೆಲ್ಲರೂ ರಕ್ಷಿಸಲ್ಪಡುವರು; ಚೀಯೋನ್‌ ಪರ್ವತದಲ್ಲಿಯೂ ಯೆರೂಸಲೇಮಿನಲ್ಲಿಯೂ ಕರ್ತನು ಕರೆಯುವ ಉಳಿದವರಲ್ಲಿಯೂ ಕರ್ತನು ಹೇಳಿದ ಪ್ರಕಾರ ಬಿಡುಗಡೆಯು ಇರುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೂ ಯೆಹೋವನ ನಾಮವನ್ನು ಹೇಳಿಕೊಳ್ಳುವವರೆಲ್ಲರಿಗೆ ರಕ್ಷಣೆಯಾಗುವದು; ಯೆಹೋವನು ತಿಳಿಸಿದಂತೆ ಚೀಯೋನ್‍ಪರ್ವತದಲ್ಲಿಯೂ ಯೆರೂಸಲೇವಿುನಲ್ಲಿಯೂ ಅನೇಕರು ಉಳಿದಿರುವರು; ಯೆಹೋವನು ಕರೆಯುವ ಜನಶೇಷದಲ್ಲಿ ಅವರು ಸೇರಿದವರಾಗಿರುವರು.
Kannada Bible (KNCL) BSI 2016
ಆದರೆ ಸರ್ವೇಶ್ವರಸ್ವಾಮಿಯ ನಾಮಸ್ಮರಣೆ ಮಾಡುವವರೆಲ್ಲರೂ ಜೀವೋದ್ಧಾರವನ್ನು ಪಡೆಯುವರು. ಅವರೇ ತಿಳಿಸಿರುವಂತೆ ಸಿಯೋನ್ ಪರ್ವತದಲ್ಲೂ ಜೆರುಸಲೇಮಿನಲ್ಲೂ ಅನೇಕರಿಗೆ ಮುಕ್ತಿ ದೊರಕುವುದು. ಅಳಿದುಳಿದವರಲ್ಲಿ ಆ ಸ್ವಾಮಿಯ ಕರೆಹೊಂದಿದವರು ಬದುಕುವರು.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರ ಹೆಸರನ್ನು ಕರೆಯುವವರೆಲ್ಲರಿಗೆ ರಕ್ಷಣೆ ಆಗುವುದು. ಏಕೆಂದರೆ ಚೀಯೋನ್ ಪರ್ವತದಲ್ಲಿಯೂ ಯೆರೂಸಲೇಮಿನಲ್ಲಿಯೂ ಅನೇಕರಿಗೆ ಮುಕ್ತಿ ದೊರಕುವುದು. ಯೆಹೋವ ದೇವರು ಹೇಳಿದ ಪ್ರಕಾರ ಯೆಹೋವ ದೇವರ ಕರೆಹೊಂದಿ ಉಳಿದವರಲ್ಲಿಯೂ ಬಿಡುಗಡೆ ಇರುವುದು.