Joel 3:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಜನಾಂಗಗಳೇ, ಎಚ್ಚರಗೊಳ್ಳಿರಿ! ಯೆಹೋಷಾಫಾಟ್ ತಗ್ಗಿಗೆ ಬನ್ನಿರಿ. ಸುತ್ತಲಿರುವ ಜನಾಂಗಗಳಿಗೆ ತೀರ್ಪುಕೊಡಲು ನಾನು ಅಲ್ಲಿ ಕುಳಿತುಕೊಳ್ಳುವೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಜನಾಂಗಗಳು ಎಚ್ಚೆತ್ತುಕೊಂಡು, ಯೆಹೋಷಾಫಾಟನ ನ್ಯಾಯತೀರ್ಪಿನ ತಗ್ಗಿಗೆ ಬರಲಿ. ಅಲ್ಲಿ ನಾನು ಸುತ್ತಣ ಜನಾಂಗಗಳಿಗೆಲ್ಲಾ, ನ್ಯಾಯತೀರಿಸಲು ಆಸೀನನಾಗುವೆನು.
Kannada BSI Bible 2016
ಜನಾಂಗಗಳು ಎಬ್ಬಿಸಲ್ಪಟ್ಟು ಯೆಹೋಷಾಫಾಟನ ತಗ್ಗಿಗೆ ಬರಲಿ; ಸುತ್ತಲಿನ ಎಲ್ಲಾ ಜನಾಂಗಗಳಿಗೆ ನ್ಯಾಯತೀರಿಸುವದಕ್ಕೆ ನಾನು ಅಲ್ಲಿ ಕೂತುಕೊಳ್ಳುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಜನಾಂಗಗಳು ಎಚ್ಚರಗೊಂಡು ಯೆಹೋವನ ನ್ಯಾಯತೀರ್ಪಿನ ತಗ್ಗಿಗೆ ಬರಲಿ; ಅಲ್ಲೇ ಸುತ್ತಣ ಜನಾಂಗಗಳಿಗೆಲ್ಲಾ ನ್ಯಾಯತೀರಿಸಲು ಆಸೀನನಾಗುವೆನು.
Kannada Bible (KNCL) BSI 2016
“ರಾಷ್ಟ್ರಗಳು ಎಚ್ಚೆತ್ತು ಸರ್ವೇಶ್ವರಸ್ವಾಮಿಯ ನ್ಯಾಯತೀರ್ಪಿನ ಕಣಿವೆಗೆ ಇಳಿಯಲಿ. ಸುತ್ತಮುತ್ತ ನೆರೆದಿರುವ ರಾಷ್ಟ್ರಗಳಿಗೆ ನ್ಯಾಯತೀರಿಸಲು ಅಲ್ಲಿ ನಾನು ಆಸೀನನಾಗಿರುವೆನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಜನಾಂಗಗಳು ಎಚ್ಚೆತ್ತು ಯೆಹೋಷಾಫಾಟನ ಕಣಿವೆಗೆ ಇಳಿಯಲಿ. ಸುತ್ತಮುತ್ತ ನೆರೆದಿರುವ ಜನಾಂಗಗಳಿಗೆ ನ್ಯಾಯತೀರಿಸಲು ಅಲ್ಲಿ ನಾನು ಆಸೀನನಾಗಿರುವೆನು.