Joel 3:16 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಚೀಯೋನಿನಿಂದ ದೇವರಾದ ಯೆಹೋವನು ಆರ್ಭಟಿಸುವನು. ಜೆರುಸಲೇಮಿನಿಂದ ಆತನು ಗರ್ಜಿಸುವನು. ಆಗ ಭೂಮ್ಯಾಕಾಶಗಳು ನಡುಗುವವು. ಆದರೆ ಯೆಹೋವನ ಜನರಿಗೆ ಆತನೇ ಆಶ್ರಯ ಸ್ಥಳವಾಗುವನು. ಆತನು ಇಸ್ರೇಲರಿಗೆ ಸುರಕ್ಷಿತ ಸ್ಥಳವಾಗುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ಚೀಯೋನಿನಿಂದ ಗರ್ಜಿಸುತ್ತಾನೆ, ಯೆರೂಸಲೇಮಿನಿಂದ ಧ್ವನಿಗೈಯುತ್ತಾನೆ. ಭೂಮಿ ಹಾಗು ಆಕಾಶಗಳು ನಡುಗುತ್ತವೆ, ಆದರೆ ಯೆಹೋವನು ತನ್ನ ಜನರಿಗೆ ಆಶ್ರಯವೂ, ಮತ್ತು ಇಸ್ರಾಯೇಲರಿಗೆ ರಕ್ಷಣದುರ್ಗವೂ ಆಗಿರುವನು.
Kannada BSI Bible 2016
ಕರ್ತನು ಚೀಯೋನಿನೊಳಗಿಂದ ಘರ್ಜಿಸಿ ಯೆರೂಸಲೇಮಿನೊಳಗಿಂದ ತನ್ನ ಶಬ್ದವನ್ನು ಕೊಡುವನು. ಆಕಾಶಗಳೂ ಭೂಮಿಯೂ ಕದಲು ವವು; ಆದರೆ ಕರ್ತನು ತನ್ನ ಜನರಿಗೆ ನಿರೀಕ್ಷೆಯೂ ಇಸ್ರಾಯೇಲನ ಮಕ್ಕಳಿಗೆ ಬಲವೂ ಆಗಿರುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ಚೀಯೋನಿನಿಂದ ಗರ್ಜಿಸುತ್ತಾನೆ, ಯೆರೂಸಲೇವಿುನಿಂದ ದನಿಗೈಯುತ್ತಾನೆ; ಭೂಮ್ಯಾಕಾಶಗಳು ನಡುಗುತ್ತವೆ. ಆದರೆ ಯೆಹೋವನು ತನ್ನ ಜನರಿಗೆ ಆಶ್ರಯವೂ ಇಸ್ರಾಯೇಲ್ಯರಿಗೆ ರಕ್ಷಣದುರ್ಗವೂ ಆಗುವನು.
Kannada Bible (KNCL) BSI 2016
ಸ್ವಾಮಿ ಸಿಯೋನಿನಿಂದ ಗರ್ಜಿಸುತ್ತಾರೆ, ಜೆರುಸಲೇಮಿನಿಂದ ಅವರ ಧ್ವನಿ ಮೊಳಗುತ್ತದೆ. ಭೂಮ್ಯಾಕಾಶಗಳು ನಡುಗುತ್ತವೆ. ಆದರೂ ಸರ್ವೇಶ್ವರ ತಮ್ಮ ಜನರಿಗೆ ಆಶ್ರಯ; ಇಸ್ರಯೇಲರಿಗೆ ರಕ್ಷಣಾ ದುರ್ಗ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರು ಚೀಯೋನಿನೊಳಗಿಂದ ಗರ್ಜಿಸಿ, ಯೆರೂಸಲೇಮಿನೊಳಗಿಂದ ಗುಡುಗುವರು. ಆಕಾಶಗಳೂ ಭೂಮಿಯೂ ನಡುಗುವುವು. ಆದರೆ ಯೆಹೋವ ದೇವರು ತಮ್ಮ ಜನರಿಗೆ ಆಶ್ರಯವೂ, ಇಸ್ರಾಯೇಲರಿಗೆ ರಕ್ಷಣೆಯ ದುರ್ಗವೂ ಆಗಿರುವರು.