Joel 3:17 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ನಾನು ನಿಮ್ಮ ದೇವರಾದ ಯೆಹೋವನು ಎಂದು ಅರಿತುಕೊಳ್ಳುವಿರಿ. ನಾನು ನನ್ನ ಪವಿತ್ರ ಪರ್ವತವಾದ ಚೀಯೋನಿನಲ್ಲಿ ವಾಸಿಸುವೆನು. ಜೆರುಸಲೇಮ್ ಪರಿಶುದ್ಧವಾಗುವದು. ಪರದೇಶಿಗಳು ಇನ್ನು ಮುಂದೆ ಅದನ್ನು ದಾಟಿಹೋಗುವುದಿಲ್ಲ.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿಮ್ಮ ದೇವರಾದ ಯೆಹೋವನು ನಾನೇ ಎಂದು ನಿಮಗೆ ಮನದಟ್ಟಾಗುವುದು. ಆಗ ನಾನು ನನ್ನ ಪರಿಶುದ್ಧ ಪರ್ವತವಾದ ಚೀಯೋನಿನಲ್ಲಿ ನೆಲೆಸುವುದರಿಂದ, ಯೆರೂಸಲೇಮ್ ಪವಿತ್ರವಾಗಿರುವುದು. ಅನ್ಯರು ಇನ್ನು ಅದರಲ್ಲಿ ಹಾದುಹೋಗುವುದಿಲ್ಲ.
Kannada BSI Bible 2016
ಹೀಗೆ ನನ್ನ ಪರಿಶುದ್ಧ ಪರ್ವತವಾದ ಚೀಯೋನಿ ನಲ್ಲಿ ವಾಸಿಸುವ ನಿಮ್ಮ ದೇವರಾದ ಕರ್ತನು ನಾನೇ ಎಂದು ನೀವು ತಿಳುಕೊಳ್ಳುವಿರಿ; ಆಗ ಯೆರೂಸಲೇಮು ಪರಿಶುದ್ಧವಾಗಿರುವದು; ಅನ್ಯರು ಇನ್ನು ಅದರಲ್ಲಿ ಹಾದುಹೋಗರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗೆ ನಾನು ನನ್ನ ಪರಿಶುದ್ಧ ಪರ್ವತವಾದ ಚೀಯೋನಿನಲ್ಲಿ ನೆಲೆಯಾಗಿ ನಿಮ್ಮ ದೇವರಾದ ಯೆಹೋವನಾಗಿದ್ದೇನೆ ಎಂದು ನಿಮಗೆ ದೃಢವಾಗುವದು; ಆಗ ಯೆರೂಸಲೇಮು ಪವಿತ್ರವಾಗಿರುವದು; ಮ್ಲೇಚ್ಫರು ಇನ್ನು ಅದನ್ನು ಹಾದುಹೋಗರು.
Kannada Bible (KNCL) BSI 2016
“ಇಸ್ರಯೇಲರೇ, ಕೇಳಿ, ಪವಿತ್ರಪರ್ವತವಾದ ಸಿಯೋನಿನಲ್ಲಿ ನೆಲೆಯಾಗಿರುವ ನಿಮ್ಮ ಸರ್ವೇಶ್ವರಸ್ವಾಮಿ ದೇವರು ನಾನೇ ಎಂದು ಆಗ ನಿಮಗೆ ಮನದಟ್ಟಾಗುವುದು. ಜೆರುಸಲೇಮ್ ಪುಣ್ಯಕ್ಷೇತ್ರವೆನಿಸಿಕೊಳ್ಳುವುದು. ಪರಕೀಯರು ಅದನ್ನೆಂದಿಗೂ ಆಕ್ರಮಿಸರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ನನ್ನ ಪರಿಶುದ್ಧ ಪರ್ವತವಾದ ಚೀಯೋನಿನಲ್ಲಿ ವಾಸಿಸುವ ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ ಎಂದು ನೀವು ತಿಳಿದುಕೊಳ್ಳುವಿರಿ. ಯೆರೂಸಲೇಮು ಪರಿಶುದ್ಧವಾಗಿರುವುದು. ವಿದೇಶಿಯರು ಅದನ್ನೆಂದಿಗೂ ಆಕ್ರಮಿಸರು.