Joel 3:19 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಈಜಿಪ್ಟ್ ಬರಿದಾಗುವದು. ಎದೋಮು ಬೆಂಗಾಡಾಗುವದು. ಯಾಕೆಂದರೆ ಅವರು ಯೆಹೂದದ ಜನರೊಂದಿಗೆ ಕ್ರೂರ ರೀತಿಯಲ್ಲಿ ವರ್ತಿಸಿದರು. ಅವರ ದೇಶಗಳಲ್ಲಿ ನಿರಪರಾಧಿಗಳನ್ನು ಕೊಂದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಐಗುಪ್ತ್ಯವು ಹಾಳಾಗುವುದು, ಎದೋಮ್, ಹಾಳಾದ ಬೆಂಗಾಡಾಗುವುದು, ಏಕೆಂದರೆ ಅವರು ಯೆಹೂದ್ಯರನ್ನು ಹಿಂಸಿಸಿ, ಅವರ ದೇಶದಲ್ಲಿ ನಿರ್ದೋಷಿಗಳ ರಕ್ತವನ್ನು ಸುರಿಸಿದ್ದಾರೆ.
Kannada BSI Bible 2016
ಐಗುಪ್ತವು ಹಾಳಾಗು ವದು; ಎದೋಮು ಹಾಳಾದ ಅರಣ್ಯವಾಗುವದು; ಅವರು ಯೆಹೂದನ ಮಕ್ಕಳನ್ನು ಬಲಾತ್ಕಾರಮಾಡಿ ತಮ್ಮ ದೇಶದಲ್ಲಿ ಅಪರಾಧವಿಲ್ಲದ ರಕ್ತವನ್ನು ಚೆಲ್ಲಿ ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಐಗುಪ್ತ್ಯರೂ ಎದೋಮ್ಯರೂ ಯೆಹೂದ್ಯರನ್ನು ಹಿಂಸಿಸಿ ಅವರ ದೇಶದಲ್ಲಿ ನಿರ್ದೋಷಿಗಳ ರಕ್ತವನ್ನು ಸುರಿಸಿದ್ದರಿಂದ ಐಗುಪ್ತವು ಹಾಳುಬೀಳುವದು, ಎದೋಮು ಬೆಗ್ಗಾಡಾಗುವದು.
Kannada Bible (KNCL) BSI 2016
“ಈಜಿಪ್ಟ್ ಪಾಳುಬೀಳುವುದು, ಎದೋಮ್ ಬೆಂಗಾಡಾಗುವುದು. ಕಾರಣ, ಈ ಎರಡು ಪಟ್ಟಣದವರು ಜುದೇಯ ನಾಡಿನ ಮೇಲೆ ಧಾಳಿಮಾಡಿದ್ದಾರೆ. ನಿರ್ದೋಷಿಗಳ ರಕ್ತವನ್ನು ಸುರಿಸಿದ್ದಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈಜಿಪ್ಟ್ ಹಾಳಾಗುವುದು. ಎದೋಮು ಹಾಳಾದ ಮರುಭೂಮಿಯಾಗುವುದು. ಏಕೆಂದರೆ ಅವರು ಯೆಹೂದದ ಜನರನ್ನು ಬಲಾತ್ಕಾರ ಮಾಡಿ, ತಮ್ಮ ದೇಶದಲ್ಲಿ ಅಪರಾಧವಿಲ್ಲದ ರಕ್ತವನ್ನು ಚೆಲ್ಲಿದರು.