Joel 3:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ತೂರೇ, ಸೀದೋನೇ, ಫಿಲಿಷ್ಟಿಯ ದೇಶಗಳೇ, ನೀವು ನನಗೆ ಎಷ್ಟರವರು? ನಾನು ಮಾಡಿದುದಕ್ಕೆ ನೀವು ನನ್ನನ್ನು ಶಿಕ್ಷಿಸುತ್ತೀರಾ? ನೀವು ಒಂದುವೇಳೆ ನನ್ನನ್ನು ಶಿಕ್ಷಿಸುತ್ತಿದ್ದೀರಿ ಎಂದು ನೆನಸಬಹುದು. ಆದರೆ ನಾನು ಬೇಗನೇ ನಿಮ್ಮನ್ನು ಶಿಕ್ಷಿಸುವೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತೂರ್, ಚೀದೋನ್, ಫಿಲಿಷ್ಟಿಯರ ಎಲ್ಲಾ ಪ್ರಾಂತ್ಯಗಳೇ, ನನ್ನ ವಿರುದ್ಧ ನಿಮಗೆ ಕೋಪವೇಕೆ? ನನಗೆ ಪ್ರತಿಕಾರ ಮಾಡುವಿರೋ? ನೀವು ನನಗೆ ಪ್ರತಿಕಾರ ಮಾಡಿದರೆ, ನೀವು ಮಾಡುವ ಕೇಡನ್ನು ತ್ವರೆಯಾಗಿ ನಿಮ್ಮ ತಲೆಗೆ ಬರುವಂತೆ ಮಾಡುವೆನು.
Kannada BSI Bible 2016
ಹೌದು, ಓ ತೂರೇ, ಚೀದೋನೇ, ಪಾಲೆಸ್ತಿನದ ಎಲ್ಲಾ ಪ್ರಾಂತ್ಯಗಳೇ, ನನ್ನ ಕೂಡ ನಿಮಗೇನು? ನನಗೆ ಮುಯ್ಯಿಗೆ ಮುಯ್ಯಿ ಸಲ್ಲಿಸುವಿರೋ? ನೀವು ನನಗೆ ಸಲ್ಲಿಸಿದರೆ ಜಾಗ್ರತೆಯಾಗಿಯೂ ತ್ವರೆಯಾಗಿಯೂ ನಿಮ್ಮ ತಲೆಯ ಮೇಲೆ ಮುಯ್ಯಿಗೆ ಮುಯ್ಯಿ ತರಿಸುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ತೂರೇ, ಚೀದೋನೇ, ಫಿಲಿಷ್ಟಿಯ ರಾಷ್ಟ್ರಗಳೇ, ನನ್ನ ಗೊಡವೆ ನಿಮಗೇಕೆ? ನನಗೆ ಪ್ರತೀಕಾರಮಾಡುವಿರೋ? ಸುಮ್ಮನೆ ತಂಟೆಮಾಡುವಿರೋ? ನೀವು ಮಾಡುವ ಕೇಡನ್ನು ತ್ವರೆಯಾಗಿ, ಶೀಘ್ರವಾಗಿ ನಿಮ್ಮ ತಲೆಗೇ ತರುವೆನು.
Kannada Bible (KNCL) BSI 2016
“ಟೈರ್, ಸಿದೋನ್ ಮತ್ತು ಫಿಲಿಷ್ಟಿಯ ಪ್ರಾಂತ್ಯಗಳೇ, ನನ್ನ ಮೇಲೆ ನಿಮಗಿರುವ ದೂರು ಯಾವುದು? ನನಗೆ ಪ್ರತೀಕಾರ ಮಾಡಬೇಕೆಂದಿರುವಿರೋ? ಹಾಗೇನಾದರೂ ಮಾಡಿದ್ದೇ ಆದರೆ, ನೀವು ಮಾಡಿದ ಕೇಡನ್ನು ತಡಮಾಡದೆ ನಿಮ್ಮ ತಲೆಗೇ ತರುವೆನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಟೈರೇ, ಸೀದೋನೇ, ಫಿಲಿಷ್ಟಿಯದ ಎಲ್ಲಾ ಪ್ರಾಂತ್ಯಗಳೇ, ನನ್ನ ವಿರೋಧವಾಗಿ ನಿಮಗೆ ಏನು ಇದೆ? ನನಗೆ ಮುಯ್ಯಿಗೆ ಮುಯ್ಯಿ ಸಲ್ಲಿಸುವಿರೋ? ನೀವು ಮುಯ್ಯಿ ನನಗೆ ಸಲ್ಲಿಸಿದರೆ, ಜಾಗ್ರತೆಯಾಗಿಯೂ ತ್ವರೆಯಾಗಿಯೂ ನಿಮ್ಮ ತಲೆಯ ಮೇಲೆ ಮುಯ್ಯಿಗೆ ಮುಯ್ಯಿ ತರಿಸುವೆನು.