Joel 3:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ನೀವು ಯೆಹೂದ ಮತ್ತು ಜೆರುಸಲೇಮಿನ ಜನರನ್ನು ಗ್ರೀಕರಿಗೆ ಮಾರಿಬಿಟ್ಟಿರಿ. ಆ ರೀತಿಯಾಗಿ ಅವರನ್ನು ಅವರ ದೇಶದಿಂದ ಬಹಳ ದೂರ ತೆಗೆದುಬಿಟ್ಟಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೂದದ ಮತ್ತು ಯೆರೂಸಲೇಮಿನ ಜನರನ್ನು ಗ್ರೀಕರಿಗೆ ಮಾರಿಬಿಟ್ಟಿದ್ದೀರಿ. ಅವರನ್ನು ಸ್ವಂತ ನಾಡಿನಿಂದ ದೂರಮಾಡಿದ್ದೀರಿ.
Kannada BSI Bible 2016
ಯೆಹೂದದ ಮಕ್ಕಳನ್ನೂ ಯೆರೂಸಲೇಮಿನ ಮಕ್ಕ ಳನ್ನೂ ತಮ್ಮ ಪ್ರಾಂತ್ಯಗಳಿಂದ ದೂರ ಮಾಡುವ ಹಾಗೆ ಗ್ರೀಕರಿಗೆ ಮಾರಿದ್ದೀರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೂದ್ಯರನ್ನೂ ಯೆರೂಸಲೇವಿುನವರನ್ನೂ ಅವರ ಗಡಿಯಿಂದ ದೂರ ಮಾಡಬೇಕೆಂದು ಗ್ರೀಕರಿಗೆ ಮಾರಿಬಿಟ್ಟಿದ್ದೀರಿ;
Kannada Bible (KNCL) BSI 2016
ಜುದೇಯ ಮತ್ತು ಜೆರುಸಲೇಮಿನ ಜನರನ್ನು ಗ್ರೀಕರಿಗೆ ಮಾರಿಬಿಟ್ಟಿದ್ದೀರಿ; ಅವರನ್ನು ತಾಯ್ನಾಡಿನಿಂದ ದೂರಮಾಡಿದ್ದೀರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೂದದ ಹಾಗೂ ಯೆರೂಸಲೇಮಿನ ಜನರನ್ನು ಅವರ ಪ್ರಾಂತಗಳಿಂದ ದೂರ ಮಾಡುವುದಕ್ಕಾಗಿ ಗ್ರೀಕರಿಗೆ ಮಾರಿದ್ದೀರಿ.