Joel 3:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ದೂರದ ಸ್ಥಳಗಳಿಗೆ ನನ್ನ ಜನರನ್ನು ಕಳುಹಿಸಿದಿರಿ, ಆದರೆ ನಾನು ಅವರನ್ನು ಹಿಂದೆ ತರುವೆನು. ಮತ್ತು ನೀವು ಮಾಡಿದ ಕೃತ್ಯಕ್ಕೆ ನಾನು ನಿಮ್ಮನ್ನು ಶಿಕ್ಷಿಸುವೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗಿರಲು ಇಗೋ, ನೀವು ಅವರನ್ನು ಮಾರಿದ ಸ್ಥಳದೊಳಗಿಂದ ಹೊರಟು ಬರುವಂತೆ ನಾನು ಅವರನ್ನು ಹುರಿದುಂಬಿಸಿ, ನೀವು ಮಾಡಿದ ಕೇಡನ್ನು ನಿಮ್ಮ ತಲೆಗೇ ತರುವೆನು.
Kannada BSI Bible 2016
ಇಗೋ, ಎಲ್ಲಿ ಅವ ರನ್ನು ಮಾರಿದ್ದಿರೋ ಆ ಸ್ಥಳದಿಂದ ನಾನು ಅವರನ್ನು ಎಬ್ಬಿಸಿ ನಿಮ್ಮ ತಲೆಯ ಮೇಲೆ ಮುಯ್ಯಿಗೆ ಮುಯ್ಯಿ ತರಿಸುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗಿರಲು ಇಗೋ, ನೀವು ಅವರನ್ನು ಮಾರಿದ ಸ್ಥಳದೊಳಗಿಂದ ಹೊರಟುಬರುವಂತೆ ನಾನು ಅವರನ್ನು ಹುರಿಗೊಳಿಸಿ ನೀವು ಮಾಡಿದ ಕೇಡನ್ನು ನಿಮ್ಮ ತಲೆಗೇ ತರುವೆನು;
Kannada Bible (KNCL) BSI 2016
ಇಂತಿರಲು, ನೀವು ಅವರನ್ನು ಮಾರಿದ ಊರುಗಳಿಂದ ದಂಗೆಯೆದ್ದು ಹೊರಬರುವಂತೆ ಅವರನ್ನು ಹುರಿದುಂಬಿಸುವೆನು. ನೀವು ಮಾಡಿದ ಕೇಡನ್ನು ನಿಮ್ಮ ತಲೆಗೇ ತರುವೆನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಇಗೋ, ಎಲ್ಲಿ ಅವರನ್ನು ಮಾರಿದಿರೋ, ಆ ಸ್ಥಳದಿಂದ ನಾನು ಅವರನ್ನು ಎಬ್ಬಿಸಿ, ನಿಮ್ಮ ತಲೆಯ ಮೇಲೆ ಮುಯ್ಯಿಗೆ ಮುಯ್ಯಿತೀರಿಸುವೆನು.