John 1:15 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೋಹಾನನು ಆತನ ಬಗ್ಗೆ ಜನರಿಗೆ ತಿಳಿಸುತ್ತಾ, “‘ನನ್ನ ನಂತರ ಬರುವ ಒಬ್ಬನು ನನಗಿಂತಲೂ ಶ್ರೇಷ್ಠನಾಗಿದ್ದಾನೆ. ಆತನು ನನಗಿಂತ ಮೊದಲೇ ಜೀವಿಸುತ್ತಿದ್ದನು’ ಎಂದು ನಾನು ಹೇಳಿದಾಗ ಈತನ ಬಗ್ಗೆಯೇ ಮಾತಾಡುತ್ತಿದ್ದೆನು” ಎಂದು ಗಟ್ಟಿಯಾಗಿ ಕೂಗಿ ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನ ವಿಷಯವಾಗಿ ಯೋಹಾನನು ಸಾಕ್ಷಿಕೊಡುತ್ತಾನೆ, ಹೇಗೆಂದರೆ “‘ನನ್ನ ನಂತರ ಬರುವಾತನು ನನಗಿಂತ ಮೊದಲೇ ಇದ್ದುದರಿಂದ ಆತನು ನನಗಿಂತಲೂ ಉನ್ನತನು’ ಎಂದು ನಾನು ಹೇಳಿದಾತನು ಈತನೇ” ಎಂದು ಘೋಷಿಸಿದನು.
Kannada BSI Bible 2016
ಯೋಹಾನನು ಆತನ ವಿಷಯದಲ್ಲಿ ಸಾಕ್ಷಿ ಕೊಟ್ಟು--ನನ್ನ ಹಿಂದೆ ಬರುವಾತನು ನನಗಿಂತ ಮೊದಲೇ ಇದ್ದದರಿಂದ ನನಗಿಂತ ಮುಂದಿನವನು ಎಂದು ನಾನು ಹೇಳಿದಾತನು ಈತನೇ ಎಂದು ಕೂಗಿ ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೋಹಾನನು ಆತನ ವಿಷಯವಾಗಿ ಸಾಕ್ಷಿಕೊಡುತ್ತಾನೆ; ಹೇಗಂದರೆ - ನನ್ನ ಹಿಂದೆ ಬರುವವನು ನನಗಿಂತ ಮೊದಲೇ ಇದ್ದದರಿಂದ ನನಗೆ ಮುಂದಿನವನಾದನು ಎಂಬದಾಗಿ ನಾನು ಹೇಳಿದವನು ಈತನೇ ಎಂದು ಕೂಗಿ ಹೇಳಿದ್ದಾನೆ.
Kannada Bible (KNCL) BSI 2016
ಯೊವಾನ್ನನು ಅವರನ್ನು ಕುರಿತು ಸಾಕ್ಷಿ ನುಡಿಯುತ್ತಾ, “ ‘ಅವರು ನನ್ನ ಬಳಿಗೆ ಬಂದವರಾದರೂ ನನಗಿಂತ ಮೊದಲೇ ಇದ್ದವರು; ಆದುದರಿಂದ ಅವರು ನನಗಿಂತಲೂ ಶ್ರೇಷ್ಠರು’ ಎಂದು ನಾನು ಹೇಳಿದ್ದು ಅವರನ್ನು ಕುರಿತೇ,” ಎಂದು ಘೋಷಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಅವರನ್ನು ಕುರಿತು ಯೋಹಾನನು ಸಾಕ್ಷಿ ಕೊಡುತ್ತಾ, ‘ನನ್ನ ಬಳಿಕ ಬರುವವರು ನನಗಿಂತ ಮೊದಲೇ ಇದ್ದುದರಿಂದ ಅವರು ನನಗಿಂತಲೂ ಶ್ರೇಷ್ಠರು’ ಎಂದು ನಾನು ಹೇಳಿದವರು ಇವರೇ,” ಎಂದು ಘೋಷಿಸಿದನು.