John 1:30 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
‘ನನ್ನ ನಂತರ ಒಬ್ಬ ವ್ಯಕ್ತಿಯು ಬರುವನು. ಆತನು ನನಗಿಂತಲೂ ದೊಡ್ಡವನು. ಏಕೆಂದರೆ ಆತನು ನನಗಿಂತಲೂ ಮೊದಲೇ ಇದ್ದವನು ಮತ್ತು ಯಾವಾಗಲೂ ಇದ್ದವನು’ ಎಂದು ನಾನು ಹೇಳುತ್ತಿದ್ದುದು ಈತನ ವಿಷಯವಾಗಿಯೇ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
‘ನನ್ನ ನಂತರ ಬರುವಾತನು ನನಗಿಂತ ಮೊದಲೇ ಇದ್ದುದರಿಂದ ಆತನು ನನಗಿಂತಲೂ ಉನ್ನತನು’ ಎಂದು ನಾನು ಹೇಳಿದ ಮಾತು ಈತನ ವಿಷಯವಾಗಿಯೇ.
Kannada BSI Bible 2016
ನನ್ನ ಹಿಂದೆ ಒಬ್ಬ ಮನುಷ್ಯನು ಬರು ತ್ತಾನೆ; ಆತನು ನನಗಿಂತ ಮೊದಲೇ ಇದ್ದದರಿಂದ ನನಗಿಂತ ಮುಂದಿನವನು ಎಂದು ನಾನು ಯಾರ ವಿಷಯದಲ್ಲಿ ಹೇಳಿದೆನೋ ಆತನೇ ಈತನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನನ್ನ ಹಿಂದೆ ಬರುವವನು ನನಗಿಂತ ಮೊದಲೇ ಇದ್ದದರಿಂದ ನನಗೆ ಮುಂದಿನವನಾದನು ಎಂದು ನಾನು ಹೇಳಿದ ಮಾತು ಈತನ ವಿಷಯವಾಗಿಯೇ.
Kannada Bible (KNCL) BSI 2016
ಇವರು ‘ನನ್ನ ಬಳಿಕ ಬಂದವರಾದರೂ ನನಗಿಂತಲೂ ಮೊದಲೇ ಇದ್ದವರು; ಆದುದರಿಂದ ಇವರು ನನಗಿಂತಲೂ ಶ್ರೇಷ್ಠರು,’ ಎಂದು ನಾನು ಹೇಳಿದುದು ಇವರನ್ನು ಕುರಿತೇ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
‘ನನ್ನ ತರುವಾಯ ಬರುವವರು ನನಗಿಂತ ಮೊದಲೇ ಇದ್ದುದರಿಂದ ಅವರು ನನಗಿಂತಲೂ ಶ್ರೇಷ್ಠರು,’ ಎಂದು ನಾನು ಹೇಳಿದವರು ಇವರೇ.