John 1:31 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆತನು ಯಾರೆಂಬುದು ನನಗೂ ಗೊತ್ತಿರಲಿಲ್ಲ. ಆದರೆ ಆತನನ್ನು ಇಸ್ರೇಲರಿಗೆ ತಿಳಿಸುವುದಕ್ಕೋಸ್ಕರ ನಾನು ಜನರಿಗೆ ನೀರಿನಿಂದ ದೀಕ್ಷಾಸ್ನಾನ ಕೊಡುತ್ತಿದ್ದೆನು” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನನಗೂ ಆತನ ಗುರುತಿರಲಿಲ್ಲ. ಆದರೆ ಆತನನ್ನು ಇಸ್ರಾಯೇಲ್ಯರಿಗೆ ಪ್ರಕಟಪಡಿಸುವುದಕ್ಕೊಸ್ಕರ ನಾನು ನೀರಿನಲ್ಲಿ ದೀಕ್ಷಾಸ್ನಾನವನ್ನು ಮಾಡಿಸುವವನಾಗಿ ಬಂದೆನು.”
Kannada BSI Bible 2016
ನಾನು ಆತನನ್ನು ಅರಿತಿರಲಿಲ್ಲ; ಆದರೆ ಆತನು ಇಸ್ರಾಯೇಲ್ಯರಿಗೆ ಪ್ರತ್ಯಕ್ಷನಾಗುವಂತೆ ನಾನು ನೀರಿನಿಂದ ಬಾಪ್ತಿಸ್ಮ ಮಾಡಿಸುವವನಾಗಿ ಬಂದಿದ್ದೇನೆ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನನಗೂ ಆತನ ಗುರುತಿರಲಿಲ್ಲ; ಆದರೆ ಆತನನ್ನು ಇಸ್ರಾಯೇಲ್ಯರಿಗೆ ತಿಳಿಯಪಡಿಸುವದಕ್ಕೋಸ್ಕರವೇ ನಾನು ನೀರಿನ ಸ್ನಾನವನ್ನು ಮಾಡಿಸುವವನಾಗಿ ಬಂದೆನು ಅಂದನು.
Kannada Bible (KNCL) BSI 2016
ಇಸ್ರಯೇಲರಿಗೆ ಇವರನ್ನು ತೋರ್ಪಡಿಸಬೇಕೆಂದೇ ನಾನು ನೀರಿನಿಂದ ಸ್ನಾನದೀಕ್ಷೆಕೊಡುತ್ತಾ ಬಂದೆನು; ಬರಬೇಕಾಗಿದ್ದವರು ಇವರೇ ಎಂದು ನನಗೂ ತಿಳಿದಿರಲಿಲ್ಲ,” ಎಂದು ನುಡಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನನಗೂ ಇವರ ಗುರುತಿರಲಿಲ್ಲ. ಆದರೆ ಇವರನ್ನು ಇಸ್ರಾಯೇಲರಿಗೆ ಪ್ರಕಟಪಡಿಸುವುದಕ್ಕೊಸ್ಕರ ನಾನು ನೀರಿನಲ್ಲಿ ದೀಕ್ಷಾಸ್ನಾನ ಮಾಡಿಸುತ್ತಾ ಬಂದೆನು,” ಎಂದು ಹೇಳಿದನು.