John 1:32 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇದಲ್ಲದೆ ಯೋಹಾನನು ಸಾಕ್ಷಿಕೊಟ್ಟು ಹೇಳಿದ್ದೇನೆಂದರೆ, “ಆತನು ಯಾರೆಂದು ನನಗೂ ಗೊತ್ತಿರಲಿಲ್ಲ. ಆದರೆ ಜನರಿಗೆ ದೀಕ್ಷಾಸ್ನಾನ ಕೊಡಲು ನನ್ನನ್ನು ಕಳುಹಿಸಿದಾತನು ನನಗೆ, ‘ಪವಿತ್ರಾತ್ಮನು ಇಳಿದುಬಂದು ಒಬ್ಬ ವ್ಯಕ್ತಿಯ ಮೇಲೆ ನೆಲಸುವುದನ್ನು ನೀನು ನೋಡುವೆ. ಪವಿತ್ರಾತ್ಮನಿಂದ ದೀಕ್ಷಾಸ್ನಾನ ಕೊಡುವವನು ಆ ವ್ಯಕ್ತಿಯೇ’ ಎಂದು ಹೇಳಿದ್ದನು. ಇದು ನೆರವೇರುವುದನ್ನು ನಾನು ಕಣ್ಣಾರೆ ಕಂಡಿದ್ದೇನೆ. ಪವಿತ್ರಾತ್ಮನು ಪರಲೋಕದಿಂದ ಪಾರಿವಾಳದ ರೂಪದಲ್ಲಿ ಇಳಿದುಬಂದು ಆತನ (ಯೇಸುವಿನ) ಮೇಲೆ ನೆಲಸುವುದನ್ನು ನಾನು ನೋಡಿದೆನು. (Verses 32-33)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಲ್ಲದೆ ಯೋಹಾನನು ಸಾಕ್ಷಿ ಕೊಟ್ಟು ಹೇಳಿದ್ದೇನೆಂದರೆ, “ದೇವರಾತ್ಮನು ಪರಲೋಕದಿಂದ ಪಾರಿವಾಳದಂತೆ ಇಳಿಯುವುದನ್ನು ಮತ್ತು ಆತನ ಮೇಲೆ ನೆಲೆಗೊಂಡಿರುವುದನ್ನು ನಾನು ಕಂಡೆನು.
Kannada BSI Bible 2016
ಯೋಹಾನನು ಸಾಕ್ಷಿಕೊಟ್ಟು--ಆತ್ಮನು ಪಾರಿವಾಳ ದಂತೆ ಪರಲೋಕದಿಂದ ಇಳಿದು ಆತನ ಮೇಲೆ ನೆಲೆ ಗೊಂಡಿರುವದನ್ನು ನಾನು ನೋಡಿದೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ಯೋಹಾನನು ಸಾಕ್ಷಿಕೊಟ್ಟು ಹೇಳಿದ್ದೇನಂದರೆ - ದೇವರಾತ್ಮವು ಪಾರಿವಾಳದಂತೆ ಆಕಾಶದಿಂದ ಇಳಿಯುವದನ್ನು ನೋಡಿದೆನು. ಅದು ಆತನ ಮೇಲೆ ನೆಲೆಗೊಂಡಿತು.
Kannada Bible (KNCL) BSI 2016
ಯೊವಾನ್ನನು ತನ್ನ ಸಾಕ್ಷ್ಯವನ್ನು ಮುಂದುವರಿಸುತ್ತಾ, “ಪಾರಿವಾಳದ ರೂಪದಲ್ಲಿ ಪವಿತ್ರಾತ್ಮ ಸ್ವರ್ಗದಿಂದ ಇಳಿದುಬಂದು ಅವರ ಮೇಲೆ ನೆಲಸುವುದನ್ನು ನಾನು ನೋಡಿದೆನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೋಹಾನನು ಸಾಕ್ಷಿಕೊಟ್ಟು, “ಪವಿತ್ರಾತ್ಮರು ಪರಲೋಕದಿಂದ ಪಾರಿವಾಳದಂತೆ ಇಳಿದುಬಂದು ಯೇಸುವಿನ ಮೇಲೆ ನೆಲೆಗೊಂಡಿರುವುದನ್ನು ನಾನು ಕಂಡೆನು.