John 1:33 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
See verse 32
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನನಗೂ ಆತನು ಯಾರೆಂಬುದು ತಿಳಿದಿರಲಿಲ್ಲ. ಆದರೆ ನೀರಿನಲ್ಲಿ ದೀಕ್ಷಾಸ್ನಾನ ಮಾಡಿಸುವುದಕ್ಕೆ ನನ್ನನ್ನು ಕಳುಹಿಸಿದಾತನು ‘ಯಾರ ಮೇಲೆ ಆತ್ಮನು ಇಳಿದುಬಂದು ನೆಲೆಯಾಗಿರುವುದನ್ನು ನೀನು ನೋಡುವಿಯೋ ಆತನೇ ಪವಿತ್ರಾತ್ಮನಿಂದ ದೀಕ್ಷಾಸ್ನಾನ ಕೊಡುವಾತನು’ ಎಂದು ತಾನೇ ನನಗೆ ಹೇಳಿದನು.
Kannada BSI Bible 2016
ನಾನು ಆತನನ್ನು ಅರಿತಿರಲಿಲ್ಲ; ಆದರೆ ನೀರಿನಿಂದ ಬಾಪ್ತಿಸ್ಮ ಮಾಡಿಸುವದಕ್ಕೆ ನನ್ನನ್ನು ಕಳುಹಿಸಿದಾತನೇ ನನಗೆ-- ಯಾವಾತನ ಮೇಲೆ ಆತ್ಮನು ಇಳಿದು ನೆಲೆಯಾಗಿರು ವದನ್ನು ನೀನು ನೋಡುವಿಯೋ ಆತನೇ ಪವಿತ್ರಾತ್ಮ ನಿಂದ ಬಾಪ್ತಿಸ್ಮ ಮಾಡಿಸುವಾತನು ಎಂದು ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನನಗೂ ಆತನ ಗುರುತಿರಲಿಲ್ಲ; ಆದರೆ ನೀರಿನ ಸ್ನಾನವನ್ನು ಮಾಡಿಸುವದಕ್ಕೆ ನನ್ನನ್ನು ಕಳುಹಿಸಿದಾತನು - ಯಾವನ ಮೇಲೆ ಆತ್ಮವು ಇಳಿದುಬಂದು ಇರುವದನ್ನು ನೀನು ನೋಡುವಿಯೋ ಆತನೇ ಪವಿತ್ರಾತ್ಮದ ಸ್ನಾನವನ್ನು ಕೊಡುವವನು ಎಂದು ತಾನೇ ನನಗೆ ಹೇಳಿದನು.
Kannada Bible (KNCL) BSI 2016
ಬರಬೇಕಾಗಿದ್ದವರು ಇವರೇ ಎಂದು ನನಗೂ ತಿಳಿದಿರಲಿಲ್ಲ. ಆದರೆ ನೀರಿನಿಂದ ಸ್ನಾನದೀಕ್ಷೆಕೊಡುವಂತೆ ನನ್ನನ್ನು ಕಳುಹಿಸಿದ ದೇವರು, ‘ಪವಿತ್ರಾತ್ಮ ಇಳಿದುಬಂದು ಯಾವ ವ್ಯಕ್ತಿಯ ಮೇಲೆ ನೆಲಸುವುದನ್ನು ನೀನು ನೋಡುವಿಯೋ ಆತನೇ ಪವಿತ್ರಾತ್ಮನಿಂದ ದೀಕ್ಷಾಸ್ನಾನ ಕೊಡುವಾತ,’ ಎಂದಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನನಗೂ ಅವರ ಗುರುತಿರಲಿಲ್ಲ. ಆದರೆ ನೀರಿನಲ್ಲಿ ದೀಕ್ಷಾಸ್ನಾನ ಮಾಡಿಸಲು ನನ್ನನ್ನು ಕಳುಹಿಸಿದವರು, ‘ಯಾರ ಮೇಲೆ ಪವಿತ್ರಾತ್ಮರು ಇಳಿದುಬಂದು ನೆಲೆಸುವುದನ್ನು ನೀನು ನೋಡುವಿಯೋ ಅವರೇ ಪವಿತ್ರಾತ್ಮರಿಂದ ದೀಕ್ಷಾಸ್ನಾನ ಮಾಡಿಸುವವರು,’ ಎಂದು ತಿಳಿಸಿದರು.