John 1:39 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೇಸು, “ನನ್ನೊಂದಿಗೆ ಬನ್ನಿ, ಆಗ ನೀವೇ ನೋಡುವಿರಿ” ಎಂದು ಹೇಳಿದನು. ಆದ್ದರಿಂದ ಆ ಇಬ್ಬರು ಹೋಗಿ ಯೇಸು ಇಳಿದುಕೊಂಡಿದ್ದ ಸ್ಥಳವನ್ನು ನೋಡಿದರು. ಆ ದಿನ ಅವರು ಅಲ್ಲಿಯೇ ಆತನೊಂದಿಗೆ ಇದ್ದರು. ಆಗ ಸಾಯಂಕಾಲ ಸುಮಾರು ನಾಲ್ಕು ಗಂಟೆಯಾಗಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನು ಅವರಿಗೆ, “ನೀವೇ ಬಂದು ನೋಡಿರಿ” ಎಂದು ಹೇಳಲು, ಅವರು ಹೋಗಿ ಆತನು ವಾಸಿಸುತ್ತಿದ್ದ ಸ್ಥಳವನ್ನು ನೋಡಿ ಆ ದಿನ ಆತನ ಸಂಗಡ ಇದ್ದರು. ಆಗ ಹೆಚ್ಚುಕಡಿಮೆ ಸಂಜೆ ನಾಲ್ಕು ಗಂಟೆಯಾಗಿತ್ತು.
Kannada BSI Bible 2016
ಆತನು ಅವರಿಗೆ--ಬಂದು ನೋಡಿರಿ ಅಂದನು. ಅವರು ಹೋಗಿ ಆತನು ವಾಸಿಸುತ್ತಿದ್ದ ಸ್ಥಳವನ್ನು ನೋಡಿ ಆ ದಿವಸ ಆತನ ಸಂಗಡ ಇದ್ದರು. ಆಗ ಹೆಚ್ಚು ಕಡಿಮೆ ಹತ್ತನೆಯ ತಾಸಾಗಿತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು - ಬಂದು ನೋಡಿರಿ ಅಂದಾಗ ಅವರು ಬಂದು ಆತನು ಇಳುಕೊಂಡಿದ್ದ ಸ್ಥಳವನ್ನು ನೋಡಿ ಆ ದಿವಸ ಆತನ ಸಂಗಡ ಇದ್ದರು. ಆಗ ಹೆಚ್ಚುಕಡಿಮೆ ಸಾಯಂಕಾಲ ನಾಲ್ಕು ಘಂಟೆಯಾಗಿತ್ತು.
Kannada Bible (KNCL) BSI 2016
ಯೇಸು ಉತ್ತರವಾಗಿ, “ಬಂದು ನೋಡಿ” ಎನ್ನಲು ಅವರು ಹೋಗಿ ಯೇಸು ಸ್ವಾಮಿ ಇದ್ದ ಸ್ಥಳವನ್ನು ಕಂಡು ಆ ದಿನವನ್ನು ಅವರೊಡನೆ ಕಳೆದರು. ಆಗ ಸಾಯಂಕಾಲ ಸುಮಾರು ನಾಲ್ಕು ಗಂಟೆಯಾಗಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಅವರಿಗೆ, “ಬಂದು ನೋಡಿರಿ,” ಎಂದು ಹೇಳಲು, ಅವರು ಹೋಗಿ ಯೇಸು ವಾಸಿಸುತ್ತಿದ್ದ ಸ್ಥಳವನ್ನು ಕಂಡು ಆ ದಿವಸ ಅವರ ಸಂಗಡ ಇದ್ದರು. ಆಗ ಸಂಜೆ ಸುಮಾರು ನಾಲ್ಕು ಗಂಟೆಯಾಗಿತ್ತು.