John 1:42 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವನು ಸೀಮೋನನನ್ನು ಯೇಸುವಿನ ಬಳಿಗೆ ಕರೆದುಕೊಂಡು ಬಂದನು. ಯೇಸು ಸೀಮೋನನ ಕಡೆಗೆ ನೋಡಿ, “ಯೋಹಾನನ ಮಗನಾದ ನಿನ್ನ ಹೆಸರು ಸೀಮೋನ. ನೀನು ಕೇಫನೆಂದು ಕರೆಸಿಕೊಳ್ಳುವೆ” ಎಂದು ಹೇಳಿದನು. (“ಕೇಫ” ಅಂದರೆ “ಪೇತ್ರ” ಎಂದರ್ಥ).
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನನ್ನು ಯೇಸುವಿನ ಬಳಿಗೆ ಕರೆದುಕೊಂಡು ಬಂದನು. ಯೇಸು ಅವನನ್ನು ನೋಡಿ “ನೀನು ಯೋಹಾನನ ಮಗನಾದ ಸೀಮೋನನು. ಇನ್ನು ಮೇಲೆ ನೀನು ‘ಕೇಫ’ ಎಂದು ಕರೆಯಲ್ಪಡುವಿ” ಎಂದು ಹೇಳಿದನು. (ಕೇಫ ಎಂದರೆ ಪೇತ್ರ ಇಲ್ಲವೆ ಬಂಡೆ ಎಂದು ಅರ್ಥ)
Kannada BSI Bible 2016
42ಆಗ ಅಂದ್ರೆಯನು ಸೀಮೋನನ್ನು ಯೇಸುವಿನ ಬಳಿಗೆ ಕರಕೊಂಡು ಬಂದನು. ಯೇಸು ಅವನನ್ನು ನೋಡಿ--ನೀನು ಯೋನನ ಮಗನಾದ ಸೀಮೋನನು, ನೀನು ಕೇಫನೆಂದು ಕರೆಯಲ್ಪಡುವಿ ಅಂದನು. (ಕೇಫ ಅಂದರೆ ಕಲ್ಲು ಎಂದರ್ಥ).
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನನ್ನು ಯೇಸುವಿನ ಬಳಿಗೆ ಕರಕೊಂಡು ಬಂದನು. (ಮೆಸ್ಸೀಯನು ಅಂದರೆ ಕ್ರಿಸ್ತನು.) ಯೇಸು ಅವನನ್ನು ನೋಡಿ - ನೀನು ಯೋಹಾನನ ಮಗನಾದ ಸೀಮೋನನು; ಇನ್ನು ಮೇಲೆ ಕೇಫನೆನಿಸಿಕೊಳ್ಳುವಿ ಅಂದನು (ಕೇಫನಂದರೆ ಪೇತ್ರ.)
Kannada Bible (KNCL) BSI 2016
ಅವನನ್ನು ಯೇಸುವಿನ ಬಳಿಗೆ ಕರತಂದನು. (’ಮೆಸ್ಸೀಯ’ ಎಂದರೆ ಅಭಿಷಿಕ್ತನಾದ ಲೋಕೋದ್ಧಾರಕ ಎಂದು ಅರ್ಥ). ಯೇಸು ಸಿಮೋನನನ್ನು ನೋಡಿ, “ಯೊವಾನ್ನನ ಮಗನಾದ ಸಿಮೋನನೇ, ಇನ್ನು ಮುಂದೆ ನಿನ್ನನ್ನು ಕೇಫನೆಂದು ಕರೆಯುವರು,” ಎಂದು ನುಡಿದರು. (’ಕೇಫ’ ಎಂದರೆ ‘ಪೇತ್ರ’ ಇಲ್ಲವೇ ‘ಬಂಡೆ’ ಎಂದರ್ಥ).
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನನ್ನು ಯೇಸುವಿನ ಬಳಿಗೆ ಕರೆತಂದನು. “ಮೆಸ್ಸೀಯ” ಎಂದರೆ ಕ್ರಿಸ್ತ ಎಂದು ಅರ್ಥ. ಯೇಸು ಅವನನ್ನು ನೋಡಿ, “ನೀನು ಯೋಹಾನನ ಮಗ ಸೀಮೋನನು. ನಿನ್ನನ್ನು ‘ಕೇಫ’ ಎಂದು ಕರೆಯುವರು,” ಎಂದು ಹೇಳಿದರು. “ಕೇಫ” ಎಂದರೆ ಪೇತ್ರ ಇಲ್ಲವೆ ಬಂಡೆ ಎಂದರ್ಥ.