John 1:43 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಮರುದಿನ ಯೇಸು ಗಲಿಲಾಯಕ್ಕೆ ಹೋಗಲು ನಿರ್ಧರಿಸಿದನು. ಯೇಸು ಫಿಲಿಪ್ಪನನ್ನು ಕಂಡು ಅವನಿಗೆ, “ನನ್ನನ್ನು ಹಿಂಬಾಲಿಸು” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮರುದಿನ ಯೇಸು ಗಲಿಲಾಯಕ್ಕೆ ಹೋಗಬೇಕೆಂದಿರುವಾಗ ಫಿಲಿಪ್ಪನನ್ನು ಕಂಡು, “ನನ್ನನ್ನು ಹಿಂಬಾಲಿಸು” ಎಂದನು.
Kannada BSI Bible 2016
ಮರುದಿನ ಯೇಸು ಗಲಿಲಾಯಕ್ಕೆ ಹೊರಟು ಹೋಗಬೇಕೆಂದಿದ್ದಾಗ ಫಿಲಿಪ್ಪನನ್ನು ಕಂಡು ಅವ ನಿಗೆ--ನನ್ನನ್ನು ಹಿಂಬಾಲಿಸು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮರುದಿನ ಯೇಸು ಗಲಿಲಾಯಕ್ಕೆ ಹೊರಟುಹೋಗಬೇಕೆಂದಿರುವಾಗ ಫಿಲಿಪ್ಪನನ್ನು ಕಂಡುಕೊಂಡು - ನನ್ನನ್ನು ಹಿಂಬಾಲಿಸು ಅಂದನು.
Kannada Bible (KNCL) BSI 2016
ಮರುದಿನ ಯೇಸು ಸ್ವಾಮಿ ಗಲಿಲಾಯ ನಾಡಿಗೆ ಹೋಗಲು ನಿರ್ಧರಿಸಿದರು. ಅವರು ಫಿಲಿಪ್ಪನನ್ನು ಕಂಡು, “ನನ್ನೊಡನೆ ಬಾ,” ಎಂದು ಕರೆದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಮರುದಿನ ಗಲಿಲಾಯಕ್ಕೆ ಹೋಗಬೇಕೆಂದಿದ್ದಾಗ, ಅವರು ಫಿಲಿಪ್ಪನನ್ನು ಕಂಡು, “ನನ್ನನ್ನು ಹಿಂಬಾಲಿಸು,” ಎಂದರು.