John 1:45 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಫಿಲಿಪ್ಪನು ನತಾನಿಯೇಲನನ್ನು ಕಂಡು ಅವನಿಗೆ, “ಯಾವನ ವಿಷಯದಲ್ಲಿ ಮೋಶೆಯು ಧರ್ಮಶಾಸ್ತ್ರದಲ್ಲಿ ಬರೆದನೋ ಮತ್ತು ಪ್ರವಾದಿಗಳು ಬರೆದರೋ, ಆತನನ್ನು ನಾವು ಕಂಡುಕೊಂಡೆವು. ಆತನ ಹೆಸರು ಯೇಸು. ಆತನು ಯೋಸೇಫನ ಮಗನು. ಆತನು ನಜರೇತಿನವನು” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಫಿಲಿಪ್ಪನು ನತಾನಯೇಲನನ್ನು ಕಂಡು ಅವನಿಗೆ “ಮೋಶೆಯು ಧರ್ಮಶಾಸ್ತ್ರದಲ್ಲಿ ಯಾರ ವಿಷಯವಾಗಿ ಬರೆದನೋ ಮತ್ತು ಪ್ರವಾದಿಗಳು ಯಾರ ವಿಚಾರವಾಗಿ ಬರೆದರೋ ಆತನು ನಮಗೆ ಸಿಕ್ಕಿದನು, ಆತನು ಯಾರೆಂದರೆ ಯೋಸೇಫನ ಮಗನಾದ ನಜರೇತಿನ ಯೇಸುವೇ” ಎಂದು ಹೇಳಿದನು.
Kannada BSI Bible 2016
ಫಿಲ್ಫಿಪನು ನತಾನಯೇಲನನ್ನು ಕಂಡು ಅವನಿಗೆ--ನ್ಯಾಯಪ್ರಮಾಣದಲ್ಲಿ ಮೋಶೆಯು ಮತ್ತು ಪ್ರವಾದಿಗಳು ಯಾವಾತನ ವಿಷಯವಾಗಿ ಬರೆದರೋ ಆತನನ್ನು ನಾವು ಕಂಡುಕೊಂಡೆವು; ಆತನು ಯೋಸೇ ಫನ ಮಗನಾದ ನಜರೇತಿನ ಯೇಸುವು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಫಿಲಿಪ್ಪನು ನತಾನಯೇಲನನ್ನು ಕಂಡುಕೊಂಡು ಅವನಿಗೆ - ಯಾವನ ವಿಷಯವಾಗಿ ಮೋಶೆಯು ಧರ್ಮಶಾಸ್ತ್ರದಲ್ಲಿ ಬರೆದನೋ ಮತ್ತು ಪ್ರವಾದಿಗಳು ಬರೆದರೋ, ಆತನು ನಮಗೆ ಸಿಕ್ಕಿದನು; ಆತನು ಯಾರಂದರೆ ಯೋಸೇಫನ ಮಗನಾದ ನಜರೇತಿನ ಯೇಸು ಎಂದು ಹೇಳಿದನು.
Kannada Bible (KNCL) BSI 2016
ಫಿಲಿಪ್ಪನು ನತಾನಿಯೇಲನನ್ನು ಕಂಡು, “ಧರ್ಮಶಾಸ್ತ್ರದಲ್ಲಿ ಮೋಶೆ ಉಲ್ಲೇಖಿಸಿದ ಮತ್ತು ಪ್ರವಾದಿಗಳು ಪ್ರವಚನ ಮಾಡಿದ ವ್ಯಕ್ತಿಯು ನಮಗೆ ಸಿಕ್ಕಿದ್ದಾರೆ. ಇವರೇ ಜೋಸೆಫನ ಮಗನಾದ ನಜರೇತ್ ಊರಿನ ಯೇಸು,” ಎಂದು ಹೇಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಫಿಲಿಪ್ಪನು ನತಾನಯೇಲನನ್ನು ಕಂಡು, “ಮೋಶೆಯ ನಿಯಮದಲ್ಲಿ ಸೂಚಿಸಿದವರೂ ಪ್ರವಾದಿಗಳೂ ಯಾರನ್ನು ಕುರಿತು ಬರೆದಿದ್ದಾರೋ ಅವರು ನಮಗೆ ಸಿಕ್ಕಿದ್ದಾರೆ. ಅವರೇ ಯೋಸೇಫನ ಪುತ್ರರಾಗಿರುವ ನಜರೇತಿನ ಯೇಸು,” ಎಂದನು.