John 1:48 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನತಾನಿಯೇಲನು, “ನೀನು ನನ್ನನ್ನು ಹೇಗೆ ಬಲ್ಲೆ?” ಎಂದು ಕೇಳಿದನು. ಯೇಸು, “ಫಿಲಿಪ್ಪನು ನನ್ನ ಬಗ್ಗೆ ನಿನಗೆ ತಿಳಿಸುವುದಕ್ಕಿಂತ ಮೊದಲೇ ನೀನು ಅಂಜೂರದ ಮರದ ಕೆಳಗಿದ್ದಾಗ ನಾನು ನಿನ್ನನ್ನು ನೋಡಿದೆನು” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದಕ್ಕೆ ನತಾನಯೇಲನು “ನೀನು ನನ್ನನ್ನು ಹೇಗೆ ಬಲ್ಲೆ?” ಎಂದು ಯೇಸುವನ್ನು ಕೇಳಿದ್ದಕ್ಕೆ ಆತನು “ಫಿಲಿಪ್ಪನು ನಿನ್ನನ್ನು ಕರೆಯುವುದಕ್ಕಿಂತ ಮೊದಲೇ ನೀನು ಆ ಅಂಜೂರದ ಮರದ ಕೆಳಗಿರುವುದನ್ನು ನಾನು ನೋಡಿದೆನು” ಎಂದು ಹೇಳಿದನು.
Kannada BSI Bible 2016
ನತಾನಯೇಲನು ಆತನಿಗೆ--ನೀನು ನನ್ನನ್ನು ಹೇಗೆ ಬಲ್ಲೆ? ಅಂದನು; ಯೇಸು ಪ್ರತ್ಯುತ್ತರ ವಾಗಿ ಅವನಿಗೆ--ಫಿಲಿಪ್ಪನು ನಿನ್ನನ್ನು ಕರೆಯುವದಕ್ಕಿಂತ ಮುಂಚೆ ನೀನು ಆ ಅಂಜೂರ ಮರದ ಕೆಳಗೆ ಇದ್ದಾಗ ನಾನು ನಿನ್ನನ್ನು ನೋಡಿದೆನು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನತಾನಯೇಲನು - ನನ್ನನ್ನು ನೀನು ಹೇಗೆ ಬಲ್ಲೆ? ಎಂದು ಯೇಸುವನ್ನು ಕೇಳಿದ್ದಕ್ಕೆ ಆತನು - ಫಿಲಿಪ್ಪನು ನಿನ್ನನ್ನು ಕರೆಯುವದಕ್ಕಿಂತ ಮುಂಚೆ ನೀನು ಆ ಅಂಜೂರದ ಮರದ ಕೆಳಗೆ ಇದ್ದಾಗ ನಿನ್ನನ್ನು ನೋಡಿದೆನು ಅಂದನು.
Kannada Bible (KNCL) BSI 2016
ನತಾನಿಯೇಲನು, “ನನ್ನ ಪರಿಚಯ ನಿಮಗೆ ಹೇಗಾಯಿತು?” ಎಂದು ಕೇಳಲು ಯೇಸು, “ಫಿಲಿಪ್ಪನು ನಿನ್ನನ್ನು ಕರೆಯುವ ಮೊದಲೇ ನೀನು ಅಂಜೂರದ ಮರದಡಿ ಇದ್ದಾಗ ನಾನು ನಿನ್ನನ್ನು ಕಂಡೆ,” ಎಂದು ಉತ್ತರಕೊಟ್ಟರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದಕ್ಕೆ ನತಾನಯೇಲನು, “ನೀವು ನನ್ನನ್ನು ಹೇಗೆ ಬಲ್ಲಿರಿ?” ಎಂದು ಕೇಳಲು, ಯೇಸು ಅವನಿಗೆ, “ಫಿಲಿಪ್ಪನು ನಿನ್ನನ್ನು ಕರೆಯುವುದಕ್ಕಿಂತ ಮುಂಚೆಯೇ ನೀನು ಅಂಜೂರದ ಮರದ ಕೆಳಗಿರುವುದನ್ನು ನಾನು ಕಂಡೆನು,” ಎಂದು ಉತ್ತರಿಸಿದರು.