John 1:50 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೇಸು ನತಾನಿಯೇಲನಿಗೆ, “ನಿನ್ನನ್ನು ಅಂಜೂರದ ಮರದ ಕೆಳಗೆ ನೋಡಿದೆನೆಂದು ನಾನು ನಿನಗೆ ಹೇಳಿದ್ದರಿಂದ ನೀನು ನನ್ನನ್ನು ನಂಬುವೆ. ಆದರೆ ಅದಕ್ಕಿಂತಲೂ ಹೆಚ್ಚು ದೊಡ್ಡ ಕಾರ್ಯಗಳನ್ನು ನೀನು ನೋಡುವೆ!” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದಕ್ಕೆ ಯೇಸು “ಆ ಅಂಜೂರದ ಮರದ ಕೆಳಗೆ ನಿನ್ನನ್ನು ನೋಡಿದೆನೆಂದು ನಾನು ನಿನಗೆ ಹೇಳಿದ ಮಾತ್ರಕ್ಕೆ ನಂಬುತ್ತೀಯೋ? ನೀನು ಇವುಗಳಿಗಿಂತಲೂ ಹೆಚ್ಚಿನ ಮಹತ್ಕಾರ್ಯಗಳನ್ನು ನೋಡುವೆ,” ಎಂದನು.
Kannada BSI Bible 2016
ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಾನು ಆ ಅಂಜೂರ ಮರದ ಕೆಳಗೆ ನಿನ್ನನ್ನು ನೋಡಿದೆನೆಂದು ಹೇಳಿದ್ದರಿಂದ ನೀನು ನಂಬು ತ್ತೀಯೋ? ನೀನು ಇವುಗಳಿಗಿಂತ ಮಹತ್ತಾದವುಗಳನ್ನು ನೋಡುವಿ ಅಂದನು.ಆತನು ಅವನಿಗೆ--ನಿನಗೆ ನಿಜನಿಜವಾಗಿ ಹೇಳುತ್ತೇನೆ. ಇಂದಿನಿಂದ ಪರಲೋಕವು ತೆರೆದಿರುವದನ್ನೂ ದೇವದೂತರು ಮನುಷ್ಯಕುಮಾರನ ಮೇಲೆ ಏರುವದನ್ನೂ ಇಳಿಯುವದನ್ನೂ ನೀವು ನೋಡುವಿರಿ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದಕ್ಕೆ ಯೇಸು - ಆ ಅಂಜೂರದ ಮರದ ಕೆಳಗೆ ನಿನ್ನನ್ನು ನೋಡಿದೆನೆಂದು ನಾನು ನಿನಗೆ ಹೇಳಿದ ಮಾತ್ರದಿಂದ ನಂಬುತ್ತೀಯೋ? ಇದಕ್ಕಿಂತ ಹೆಚ್ಚಿನ ಕಾರ್ಯಗಳನ್ನು ನೋಡುವಿ ಅಂದನು.
Kannada Bible (KNCL) BSI 2016
ಆಗ ಯೇಸು, “ಅಂಜೂರದ ಮರದಡಿಯಲ್ಲಿ ನಿನ್ನನ್ನು ಕಂಡೆ ಎಂದು ನಾನು ಹೇಳಿದ ಮಾತ್ರಕ್ಕೆ ಇಷ್ಟೊಂದು ವಿಶ್ವಾಸವೆ? ಇದಕ್ಕೂ ಮಿಗಿಲಾದವುಗಳನ್ನು ನೀನು ಕಾಣುವೆ,” ಎಂದು ನುಡಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಅವನಿಗೆ, “ನಿನ್ನನ್ನು ಅಂಜೂರದ ಮರದ ಕೆಳಗೆ ಕಂಡಿದ್ದೆ ಎಂದು ನಾನು ಹೇಳಿದ್ದಕ್ಕೆ ನೀನು ನಂಬುತ್ತೀಯೋ? ನೀನು ಇವುಗಳಿಗಿಂತಲೂ ಮಹಾಕಾರ್ಯಗಳನ್ನು ಕಾಣುವೆ,” ಎಂದು ಉತ್ತರಿಸಿದರು.