John 1:51 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅದಲ್ಲದೆ ಯೇಸು, “ನಾನು ನಿನಗೆ ಸತ್ಯವನ್ನು ಹೇಳುತ್ತೇನೆ. ಪರಲೋಕವು ತೆರೆದಿರುವುದನ್ನೂ ಮನುಷ್ಯಕುಮಾರನ ಮೇಲೆ ದೇವದೂತರುಗಳು ಏರಿಹೋಗುವುದನ್ನೂ ಕೆಳಗೆ ಇಳಿದುಬರುವುದನ್ನೂ ನೀವು ನೋಡುವಿರಿ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೇಸು “ನಾನು ನಿಮಗೆ ನಿಜ ನಿಜವಾಗಿ ಹೇಳುತ್ತೇನೆ. ಪರಲೋಕವು ತೆರೆದಿರುವುದನ್ನೂ ಮನುಷ್ಯಕುಮಾರನ ಮೇಲೆ ದೇವದೂತರು ಏರುತ್ತಾ ಇಳಿಯುತ್ತಾ ಇರುವುದನ್ನೂ ನೀವು ನೋಡುವಿರಿ” ಎಂದು ಹೇಳಿದನು.
Kannada BSI Bible 2016
ಆತನು ಅವನಿಗೆ--ನಿನಗೆ ನಿಜನಿಜವಾಗಿ ಹೇಳುತ್ತೇನೆ. ಇಂದಿನಿಂದ ಪರಲೋಕವು ತೆರೆದಿರುವದನ್ನೂ ದೇವದೂತರು ಮನುಷ್ಯಕುಮಾರನ ಮೇಲೆ ಏರುವದನ್ನೂ ಇಳಿಯುವದನ್ನೂ ನೀವು ನೋಡುವಿರಿ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ಅವನಿಗೆ - ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಪರಲೋಕವು ತೆರೆದಿರುವದನ್ನೂ ಮನುಷ್ಯಕುಮಾರನ ಮೇಲೆ ದೇವದೂತರು ಏರಿಹೋಗುತ್ತಾ ಇಳಿದುಬರುತ್ತಾ ಇರುವದನ್ನೂ ನೋಡುವಿರಿ ಎಂದು ಹೇಳಿದನು.
Kannada Bible (KNCL) BSI 2016
ತಮ್ಮ ಮಾತನ್ನು ಮುಂದುವರೆಸುತ್ತಾ, “ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ. ಸ್ವರ್ಗವು ತೆರೆದಿರುವುದನ್ನೂ ನರಪುತ್ರನ ಮುಖಾಂತರ ದೇವದೂತರು ಏರುವುದನ್ನೂ ಇಳಿಯುವುದನ್ನೂ ನೀವು ಕಾಣುವಿರಿ,” ಎಂದು ಹೇಳಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಅವನಿಗೆ, “ನಾನು ನಿಮಗೆ ನಿಜವಾಗಿ ಹೇಳುವುದೇನೆಂದರೆ, ನೀವು ಪರಲೋಕವು ತೆರೆದಿರುವುದನ್ನೂ ದೇವದೂತರು ಮನುಷ್ಯಪುತ್ರನಾದ ನನ್ನ ಮುಖಾಂತರ ಇಳಿಯುತ್ತಾ ಏರುತ್ತಾ ಇರುವುದನ್ನೂ ಕಾಣುವಿರಿ,” ಎಂದು ಹೇಳಿದರು.