John 1:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೋಹಾನನು ಬೆಳಕಿನ (ಕ್ರಿಸ್ತನ) ಬಗ್ಗೆ ಜನರಿಗೆ ತಿಳಿಸುವುದಕ್ಕಾಗಿ ಬಂದನು. ತನ್ನ ಮೂಲಕ ಎಲ್ಲಾ ಜನರು ಬೆಳಕಿನ ಬಗ್ಗೆ ಕೇಳಿ ನಂಬಿಕೊಳ್ಳಲೆಂದು ಅವನು ಬಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಯೋಹಾನನು ಸಾಕ್ಷಿಗಾಗಿ ಬಂದನು. ತನ್ನ ಮೂಲಕವಾಗಿ ಎಲ್ಲರೂ ನಂಬುವಂತೆ ಅವನು ಬೆಳಕಿನ ವಿಷಯದಲ್ಲಿ ಸಾಕ್ಷಿಕೊಡಲು ಬಂದನು.
Kannada BSI Bible 2016
ಎಲ್ಲರೂ ತನ್ನ ಮೂಲಕವಾಗಿ ನಂಬುವಂತೆ ಅವನೇ ಆ ಬೆಳಕಿನ ವಿಷಯದಲ್ಲಿ ಸಾಕ್ಷಿ ಕೊಡುವದಕ್ಕೆ ಸಾಕ್ಷಿಗಾಗಿ ಬಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ತನ್ನ ಮೂಲಕವಾಗಿ ಎಲ್ಲರು ನಂಬುವಂತೆ ಅವನು ಆ ಬೆಳಕಿನ ವಿಷಯದಲ್ಲಿ ಸಾಕ್ಷಿಕೊಡುವದಕ್ಕೆ ಬಂದನು.
Kannada Bible (KNCL) BSI 2016
ಈತನು ಸಾಕ್ಷಿಕೊಡಲು ಬಂದನು. ತನ್ನ ಮುಖಾಂತರ ಸರ್ವರೂ ವಿಶ್ವಾಸಿಸುವಂತೆ ಆ ಜ್ಯೋತಿಯನ್ನು ಕುರಿತು ಸಾಕ್ಷಿನೀಡಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತನ್ನ ಮೂಲಕ ಎಲ್ಲರು ವಿಶ್ವಾಸವಿಡುವಂತೆ ಅವನು ಆ ಬೆಳಕಿನ ವಿಷಯದಲ್ಲಿ ಸಾಕ್ಷಿ ಕೊಡಲು ಯೋಹಾನನು ಸಾಕ್ಷಿಯಾಗಿ ಬಂದನು.