John 10:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಕುರಿಗಳನ್ನು ನೋಡಿಕೊಳ್ಳುವುದಕ್ಕಾಗಿ ನೇಮಿತನಾಗಿರುವ ಕೂಲಿಯಾಳು ಕುರುಬನಿಗಿಂತ ಭಿನ್ನವಾಗಿದ್ದಾನೆ. ಕೂಲಿಯಾಳು ಕುರಿಗಳ ಒಡೆಯನಲ್ಲ. ಆದ್ದರಿಂದ ಕೂಲಿಯಾಳು ತೋಳ ಬರುವುದನ್ನು ಕಾಣುವಾಗ ಕುರಿಗಳನ್ನು ಬಿಟ್ಟು ಓಡಿಹೋಗುತ್ತಾನೆ. ಆಗ ತೋಳವು ಕುರಿಗಳ ಮೇಲೆ ಬಿದ್ದು ಅವುಗಳನ್ನು ಚದರಿಸಿಬಿಡುತ್ತದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕೂಲಿಯಾಳು ಕುರಿಗಳ ಕುರುಬನೂ ಒಡೆಯನೂ ಆಗಿರದೆ, ಅವನು ತೋಳ ಬರುವುದನ್ನು ನೋಡುತ್ತಲೇ ಕುರಿಗಳನ್ನು ಬಿಟ್ಟು ಓಡಿ ಹೋಗುತ್ತಾನೆ. ಆಗ ತೋಳವು ಕುರಿಗಳನ್ನು ಹಿಡಿದುಕೊಂಡು ಮಂದೆಯನ್ನು ಚದರಿಸುತ್ತದೆ.
Kannada BSI Bible 2016
ಆದರೆ ಕೂಲಿಯವನು ಕುರುಬನಲ್ಲವಾದದ ರಿಂದಲೂ ಕುರಿಗಳು ತನ್ನವುಗಳಲ್ಲವಾದದರಿಂದಲೂ ತೋಳ ಬರುವದನ್ನು ಕಂಡು ಕುರಿಗಳನ್ನು ಬಿಟ್ಟು ಓಡಿ ಹೋಗುತ್ತಾನೆ; ಆಗ ತೋಳವು ಕುರಿಗಳನ್ನು ಹಿಡಿದು ಕೊಂಡು ಅವುಗಳನ್ನು ಚದರಿಸುತ್ತದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಕೂಲಿಯಾಳು ಕುರುಬನೂ ಕುರಿಗಳ ಒಡೆಯನೂ ಆಗಿರದೆ ತೋಳ ಬರುವದನ್ನು ಕಾಣುತ್ತಲೇ ಕುರಿಗಳನ್ನು ಬಿಟ್ಟು ಓಡಿಹೋಗುತ್ತಾನೆ; ತೋಳವು ಅವುಗಳನ್ನು ಹಿಡುಕೊಂಡು ಹಿಂಡನ್ನು ಚದರಿಸುತ್ತದೆ.
Kannada Bible (KNCL) BSI 2016
ಕುರಿಗಾಹಿಯಾಗಲಿ, ಕುರಿಗಳ ಒಡೆಯನಾಗಲಿ ಅಲ್ಲದ ಕೂಲಿಯಾಳು, ತೋಳ ಬರುವುದನ್ನು ಕಂಡದ್ದೇ, ಕುರಿಗಳನ್ನು ಬಿಟ್ಟು ಓಡಿಹೋಗುತ್ತಾನೆ. ತೋಳವು ಬಂದು ಕುರಿಗಳ ಮೇಲೆ ಎರಗಿ, ಮಂದೆಯನ್ನು ಚದರಿಸುತ್ತದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕೂಲಿಯಾಳು ಕುರಿಗಳ ಕುರುಬನಲ್ಲ; ಅವನು ತೋಳ ಬರುವುದನ್ನು ಕಂಡು ಕುರಿಗಳನ್ನು ಬಿಟ್ಟು ಓಡಿಹೋಗುತ್ತಾನೆ. ಆಗ ತೋಳವು ಕುರಿಗಳನ್ನು ಹಿಡಿದುಕೊಂಡು ಹಿಂಡನ್ನು ಚದರಿಸುತ್ತದೆ.