John 10:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ನಾನು ಕುರಿಗಳಿಗಾಗಿ (ಜನರಿಗಾಗಿ) ಚಿಂತಿಸುವ ಕುರುಬನಾಗಿದ್ದೇನೆ. ನನ್ನ ತಂದೆಯು ನನ್ನನ್ನು ತಿಳಿದಿರುವಂತೆ ನನ್ನ ಕುರಿಗಳನ್ನು ನಾನು ತಿಳಿದಿದ್ದೇನೆ. ಮತ್ತು ನಾನು ನನ್ನ ತಂದೆಯನ್ನು ತಿಳಿದಿರುವಂತೆ ನನ್ನ ಕುರಿಗಳು ನನ್ನನ್ನು ತಿಳಿದಿವೆ. ಈ ಕುರಿಗಳಿಗೋಸ್ಕರ ನನ್ನ ಜೀವವನ್ನೇ ಕೊಡುತ್ತೇನೆ. (Verses 14-15)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನೇ ನಿಜವಾದ ಒಳ್ಳೆಯ ಕುರುಬನು. ನನ್ನ ಕುರಿಗಳನ್ನು ನಾನು ಬಲ್ಲವನಾಗಿದ್ದೇನೆ. ನನ್ನ ಕುರಿಗಳು ನನ್ನನ್ನು ಬಲ್ಲವು.
Kannada BSI Bible 2016
ನಾನೇ ಒಳ್ಳೇ ಕುರುಬನು; ನನ್ನ ಕುರಿಗಳನ್ನು ನಾನು ಬಲ್ಲೆನು. ನನ್ನ ಕುರಿಗಳು ನನ್ನನ್ನು ತಿಳಿದವೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನೇ ಒಳ್ಳೇ ಕುರುಬನು; ತಂದೆಯು ನನ್ನನ್ನು ನಾನು ತಂದೆಯನ್ನು ತಿಳಿದಿರುವಂತೆಯೇ ನಾನು ನನ್ನ ಕುರಿಗಳನ್ನು ತಿಳಿದಿದ್ದೇನೆ; ನನ್ನ ಕುರಿಗಳು ನನ್ನನ್ನು ತಿಳಿದವೆ; ಮತ್ತು ಕುರಿಗಳಿಗೋಸ್ಕರ ನನ್ನ ಪ್ರಾಣವನ್ನು ಕೊಡುತ್ತೇನೆ.
Kannada Bible (KNCL) BSI 2016
ನಾನಾದರೋ ಉತ್ತಮ ಕುರಿಗಾಹಿ. ಪಿತನು ನನ್ನನ್ನು ಬಲ್ಲರು; ನಾನೂ ಪಿತನನ್ನು ಬಲ್ಲೆ. ಅಂತೆಯೇ ನಾನು ನನ್ನ ಕುರಿಗಳನ್ನು ಬಲ್ಲೆನು; ಅವು ನನ್ನನ್ನು ಬಲ್ಲವು. ಅವುಗಳಿಗೋಸ್ಕರ ನಾನು ನನ್ನ ಪ್ರಾಣವನ್ನೇ ಕೊಡುತ್ತೇನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನಾನೇ ಒಳ್ಳೆಯ ಕುರುಬನು. ನನ್ನ ಕುರಿಗಳನ್ನು ನಾನು ತಿಳಿದಿದ್ದೇನೆ. ನನ್ನ ಕುರಿಗಳು ನನ್ನನ್ನು ತಿಳಿದಿವೆ.