John 10:18 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನನ್ನ ಪ್ರಾಣವನ್ನು ಯಾರೂ ನನ್ನಿಂದ ಕಸಿದುಕೊಳ್ಳಲಾರರು; ನಾನೇ ಅದನ್ನು ಇಚ್ಛಾಪೂರ್ವಕವಾಗಿ ಕೊಡುತ್ತೇನೆ. ನನ್ನ ಪ್ರಾಣವನ್ನು ಕೊಡುವುದಕ್ಕೂ ಅದನ್ನು ಮತ್ತೆ ಪಡೆದುಕೊಳ್ಳುವುದಕ್ಕೂ ನನಗೆ ಹಕ್ಕಿದೆ. ಹೀಗೆ ಮಾಡಬೇಕೆಂದು ತಂದೆಯೇ ನನಗೆ ಆಜ್ಞಾಪಿಸಿದ್ದಾನೆ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನನ್ನ ಪ್ರಾಣವನ್ನು ಯಾರೂ ನನ್ನಿಂದ ತೆಗೆದುಕೊಳ್ಳುವುದಿಲ್ಲ. ಆದರೆ ನನ್ನಷ್ಟಕ್ಕೆ ನಾನೇ ಅದನ್ನು ಕೊಡುತ್ತೇನೆ. ಅದನ್ನು ಕೊಡುವುದಕ್ಕೆ ನನಗೆ ಅಧಿಕಾರ ಉಂಟು. ಅದನ್ನು ಪುನಃ ಪಡೆದುಕೊಳ್ಳುವುದಕ್ಕೂ ನನಗೆ ಅಧಿಕಾರವಿದೆ. ಈ ಆಜ್ಞೆಯನ್ನು ನಾನು ನನ್ನ ತಂದೆಯಿಂದ ಹೊಂದಿದ್ದೇನೆ” ಎಂದನು.
Kannada BSI Bible 2016
ಯಾವ ಮನುಷ್ಯನಾದರೂ ಅದನ್ನು ನನ್ನಿಂದ ತೆಗೆಯುವದಿಲ್ಲ; ಆದರೆ ನನ್ನಷ್ಟಕ್ಕೆ ನಾನೇ ಅದನ್ನು ಕೊಡುತ್ತೇನೆ. ನಾನು ಅದನ್ನು ಕೊಡುವದಕ್ಕೆ ನನಗೆ ಅಧಿಕಾರವಿದೆ; ಅದನ್ನು ತಿರಿಗಿ ಪಡಕೊಳ್ಳುವದಕ್ಕೆ ನನಗೆ ಅಧಿಕಾರವಿದೆ. ಈ ಅಪ್ಪಣೆಯನ್ನು ನಾನು ನನ್ನ ತಂದೆ ಯಿಂದ ಹೊಂದಿದ್ದೇನೆ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನನ್ನ ಪ್ರಾಣವನ್ನು ಯಾರೂ ನನ್ನಿಂದ ತೆಗೆಯರು, ನನ್ನಷ್ಟಕ್ಕೆ ನಾನೇ ಅದನ್ನು ಕೊಡುತ್ತೇನೆ; ಅದನ್ನು ಕೊಡುವದಕ್ಕೆ ನನಗೆ ಅಧಿಕಾರ ಉಂಟು, ಅದನ್ನು ತಿರಿಗಿ ಪಡಕೊಳ್ಳುವದಕ್ಕೆ ನನಗೆ ಅಧಿಕಾರ ಉಂಟು; ಈ ಅಪ್ಪಣೆಯನ್ನು ನನ್ನ ತಂದೆಯಿಂದ ಹೊಂದಿದ್ದೇನೆ ಅಂದನು.
Kannada Bible (KNCL) BSI 2016
ನನ್ನ ಪ್ರಾಣವನ್ನು ಯಾರೂ ನನ್ನಿಂದ ಕಸಿದುಕೊಳ್ಳಲಾರರು; ನಾನಾಗಿಯೇ ಅದನ್ನು ಧಾರೆಯೆರೆಯುತ್ತೇನೆ. ಅದನ್ನು ಧಾರೆಯೆರೆಯುವ ಹಕ್ಕು ನನಗಿದೆ. ಅದನ್ನು ಪುನಃ ಪಡೆಯುವ ಹಕ್ಕು ಸಹ ನನಗಿದೆ. ಈ ಆಜ್ಞೆಯನ್ನು ನಾನು ನನ್ನ ಪಿತನಿಂದ ಪಡೆದಿದ್ದೇನೆ,” ಎಂದು ನುಡಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯಾರೂ ನನ್ನ ಪ್ರಾಣವನ್ನು ನನ್ನಿಂದ ತೆಗೆಯುವುದಿಲ್ಲ. ಆದರೆ ನನ್ನಷ್ಟಕ್ಕೆ ನಾನೇ ಅದನ್ನು ಕೊಡುವೆನು. ನಾನು ಅದನ್ನು ಕೊಡುವುದಕ್ಕೆ ನನಗೆ ಅಧಿಕಾರವಿದೆ. ಅದನ್ನು ಪುನಃ ತೆಗೆದುಕೊಳ್ಳುವುದಕ್ಕೂ ನನಗೆ ಅಧಿಕಾರವಿದೆ. ಈ ಆಜ್ಞೆಯನ್ನು ನಾನು ನನ್ನ ತಂದೆಯಿಂದ ಪಡೆದಿದ್ದೇನೆ,” ಎಂದರು.