John 10:24 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೂದ್ಯರು ಯೇಸುವಿನ ಸುತ್ತಲೂ ನೆರೆದರು. ಅವರು ಆತನಿಗೆ, “ಇನ್ನೆಷ್ಟುಕಾಲ ನೀನು ನಿನ್ನ ಬಗ್ಗೆ ನಮ್ಮನ್ನು ಆಶ್ಚರ್ಯಗೊಳಿಸುವೆ? ನೀನು ಕ್ರಿಸ್ತನಾಗಿದ್ದರೆ, ನಮಗೆ ಸ್ಪಷ್ಟವಾಗಿ ತಿಳಿಸು” ಎಂದು ಹೇಳಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೂದ್ಯರು ಆತನನ್ನು ಸುತ್ತುವರೆದು ಆತನಿಗೆ, “ಇನ್ನು ಎಷ್ಟು ಕಾಲ ನಮ್ಮನ್ನು ಸಂದಿಗ್ಧದಲ್ಲಿ ಇಡುತ್ತಿ? ನೀನು ಕ್ರಿಸ್ತನಾಗಿದ್ದರೆ ಅದನ್ನು ನಮಗೆ ಸ್ಪಷ್ಟವಾಗಿ ಹೇಳು” ಎಂದರು.
Kannada BSI Bible 2016
ಆಗ ಯೆಹೂದ್ಯರು ಆತನ ಸುತ್ತಲು ಬಂದು ಆತನಿಗೆ--ಇನ್ನು ಎಷ್ಟರ ವರೆಗೆ ನಮ್ಮನ್ನು ಸಂದೇಹಪಡಿಸುತ್ತೀ? ನೀನು ಕ್ರಿಸ್ತ ನಾಗಿದ್ದರೆ ನಮಗೆ ಸ್ಪಷ್ಟವಾಗಿ ಹೇಳು ಅಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇನ್ನು ಎಷ್ಟು ಕಾಲ ನಮ್ಮಲ್ಲಿ ಅನುಮಾನ ಹುಟ್ಟಿಸುತ್ತೀ? ನೀನು ಕ್ರಿಸ್ತನಾಗಿದ್ದರೆ ಅದನ್ನು ನಮಗೆ ಸ್ಪಷ್ಟವಾಗಿ ಹೇಳು ಅಂದರು.
Kannada Bible (KNCL) BSI 2016
ಯೆಹೂದ್ಯರು ಅವರನ್ನು ಸುತ್ತುವರಿದು, “ಇನ್ನೆಷ್ಟುಕಾಲ ನಮ್ಮನ್ನು ಸಂಶಯದಲ್ಲಿರಿಸುವೆ?ನೀನೇ ಅಭಿಷಿಕ್ತನಾದ ಲೋಕೋದ್ಧಾರಕ ಆಗಿದ್ದರೆ ನಮಗೆ ಸ್ಪಷ್ಟವಾಗಿ ಹೇಳು,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯೆಹೂದ್ಯರು ಯೇಸುವನ್ನು ಸುತ್ತುವರೆದು, “ಇನ್ನೆಷ್ಟು ಕಾಲ ನಮ್ಮನ್ನು ಸಂಶಯದಲ್ಲಿರಿಸುವೆ? ನೀನು ಕ್ರಿಸ್ತನಾಗಿದ್ದರೆ ನಮಗೆ ಸ್ಪಷ್ಟವಾಗಿ ಹೇಳು,” ಎಂದರು.