John 10:25 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೇಸು, “ನಾನು ಆಗಲೇ ನಿಮಗೆ ಹೇಳಿದೆನು. ಆದರೆ ನೀವು ನಂಬಲಿಲ್ಲ. ನನ್ನ ತಂದೆಯ ಹೆಸರಿನಲ್ಲಿ ನಾನು ಅದ್ಭುತಕಾರ್ಯಗಳನ್ನು ಮಾಡುತ್ತೇನೆ. ನಾನು ಯಾರೆಂಬುದನ್ನು ಆ ಅದ್ಭುತಕಾರ್ಯಗಳು ತೋರಿಸುತ್ತವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದಕ್ಕೆ ಯೇಸು, “ನಾನು ನಿಮಗೆ ಹೇಳಿದೆನು, ಆದರೆ ನೀವು ನಂಬುವುದಿಲ್ಲ. ನನ್ನ ತಂದೆಯ ಹೆಸರಿನಲ್ಲಿ ನಾನು ಮಾಡುವ ಕ್ರಿಯೆಗಳೇ ನನ್ನ ವಿಷಯವಾಗಿ ಸಾಕ್ಷಿಯಾಗಿವೆ.
Kannada BSI Bible 2016
ಯೇಸು ಅವರಿಗೆ--ನಾನು ನಿಮಗೆ ಹೇಳಿದೆನು, ಆದರೆ ನೀವು ನಂಬಲಿಲ್ಲ; ನನ್ನ ತಂದೆಯ ಹೆಸರಿನಲ್ಲಿ ನಾನು ಮಾಡುವ ಕ್ರಿಯೆಗಳೇ ನನ್ನ ವಿಷಯವಾಗಿ ಸಾಕ್ಷಿಕೊಡುತ್ತವೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದಕ್ಕೆ ಯೇಸು - ನಿಮಗೆ ಹೇಳಿದೆನು, ಆದರೆ ನೀವು ನಂಬದೆ ಇದ್ದೀರಿ; ನನ್ನ ತಂದೆಯ ಹೆಸರಿನಲ್ಲಿ ನಾನು ಮಾಡುವ ಕ್ರಿಯೆಗಳೇ ನನಗೆ ಸಾಕ್ಷಿಯಾಗಿವೆ.
Kannada Bible (KNCL) BSI 2016
ಯೇಸು ಪ್ರತ್ಯುತ್ತರವಾಗಿ, “ನಾನು ನಿಮಗೆ ಹೇಳಿಯಾಯಿತು. ಆದರೂ ನೀವು ನಂಬುತ್ತಿಲ್ಲ. ನನ್ನ ಪಿತನ ಹೆಸರಿನಲ್ಲಿ ನಾನು ಮಾಡುವ ಕಾರ್ಯಗಳೇ ನನ್ನ ಪರವಾಗಿ ಸಾಕ್ಷಿಕೊಡುತ್ತವೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಅವರಿಗೆ, “ನಾನು ನಿಮಗೆ ಹೇಳಿದೆನು. ಆದರೆ ನೀವು ನಂಬುತ್ತಾ ಇಲ್ಲ. ನನ್ನ ತಂದೆಯ ಹೆಸರಿನಲ್ಲಿ ನಾನು ಮಾಡುವ ಕ್ರಿಯೆಗಳೇ ನನ್ನ ವಿಷಯವಾಗಿ ಸಾಕ್ಷಿ ಕೊಡುತ್ತವೆ.