John 10:32 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ಯೇಸು ಅವರಿಗೆ, “ನಾನು ತಂದೆಯಿಂದ ಅನೇಕ ಒಳ್ಳೆಯ ಕಾರ್ಯಗಳನ್ನು ಮಾಡಿದ್ದೇನೆ. ನೀವು ಆ ಕಾರ್ಯಗಳನ್ನು ನೋಡಿದ್ದೀರಿ. ಆ ಒಳ್ಳೆಯ ಕಾರ್ಯಗಳಲ್ಲಿ ಯಾವುದರ ನಿಮಿತ್ತ ನೀವು ನನ್ನನ್ನು ಕೊಲ್ಲಬೇಕೆಂದಿದ್ದೀರಿ?” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೇಸು ಅವರಿಗೆ, “ನನ್ನ ತಂದೆಯಿಂದ ಅನೇಕ ಒಳ್ಳೆಯ ಕ್ರಿಯೆಗಳನ್ನು ನಿಮಗೆ ತೋರಿಸಿದ್ದೇನೆ. ಅವುಗಳಲ್ಲಿ ಯಾವ ಕ್ರಿಯೆಗಳ ನಿಮಿತ್ತ ನೀವು ನನ್ನ ಮೇಲೆ ಕಲ್ಲೆಸೆಯಬೇಕೆಂದಿದ್ದೀರಿ?” ಎಂದು ಕೇಳಿದ್ದಕ್ಕೆ,
Kannada BSI Bible 2016
ಅದಕ್ಕೆ ಯೇಸು ಅವರಿಗೆ--ನನ್ನ ತಂದೆಯಿಂದ ಅನೇಕ ಒಳ್ಳೇ ಕಾರ್ಯ ಗಳನ್ನು ನಾನು ನಿಮಗೆ ತೋರಿಸಿದ್ದೇನೆ; ಅವುಗಳಲ್ಲಿ ಯಾವ ಕಾರ್ಯಗಳಿಗೋಸ್ಕರ ನೀವು ನನ್ನ ಮೇಲೆ ಕಲ್ಲೆಸೆಯಬೇಕೆಂದಿದ್ದೀರಿ ಎಂದು ಕೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೇಸು ಅವರನ್ನು - ತಂದೆಯ ಕಡೆಯಿಂದ ಅನೇಕ ಒಳ್ಳೇ ಕ್ರಿಯೆಗಳನ್ನು ನಿಮಗೆ ತೋರಿಸಿದೆನು; ಅವುಗಳಲ್ಲಿ ಯಾವ ಕ್ರಿಯೆಯ ದೆಸೆಯಿಂದ ನನ್ನ ಮೇಲೆ ಕಲ್ಲೆಸೆಯುತ್ತೀರಿ ಎಂದು ಕೇಳಿದ್ದಕ್ಕೆ
Kannada Bible (KNCL) BSI 2016
ಅದಕ್ಕೆ ಯೇಸು, “ಪಿತನ ಹೆಸರಿನಲ್ಲಿ ನಾನು ಎಷ್ಟೋ ಸತ್ಕಾರ್ಯಗಳನ್ನು ನಿಮ್ಮ ಮುಂದೆ ಮಾಡಿದ್ದೇನೆ. ಇವುಗಳಲ್ಲಿ ಯಾವುದಕ್ಕಾಗಿ ನನ್ನ ಮೇಲೆ ಕಲ್ಲೆಸೆಯಬೇಕೆಂದಿದ್ದೀರಿ?” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದಕ್ಕೆ ಯೇಸು ಅವರಿಗೆ, “ನನ್ನ ತಂದೆಯಿಂದ ಅನೇಕ ಒಳ್ಳೆಯ ಕಾರ್ಯಗಳನ್ನು ನಾನು ನಿಮಗೆ ತೋರಿಸಿದ್ದೇನೆ. ಅವುಗಳಲ್ಲಿ ಯಾವ ಕಾರ್ಯಕ್ಕಾಗಿ ನೀವು ನನ್ನ ಮೇಲೆ ಕಲ್ಲೆಸೆಯಬೇಕೆಂದಿದ್ದೀರಿ?” ಎಂದು ಕೇಳಿದರು.