John 10:33 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೂದ್ಯರು, “ನಾವು ನಿನ್ನನ್ನು ಕೊಲ್ಲುತ್ತಿರುವುದು ನೀನು ಮಾಡಿದ ಯಾವುದೇ ಒಳ್ಳೆಯ ಕಾರ್ಯದ ನಿಮಿತ್ತದಿಂದಲ್ಲ. ನೀನು ಮಾಡುತ್ತಿರುವ ದೇವದೂಷಣೆಗಾಗಿ. ನೀನು ಕೇವಲ ಒಬ್ಬ ಮನುಷ್ಯ. ನೀನು ನಿನ್ನನ್ನೇ ದೇವರೆಂದು ಹೇಳಿಕೊಳ್ಳುತ್ತಿರುವೆ! ಆದಕಾರಣ ಕಲ್ಲುಗಳಿಂದ ನಿನ್ನನ್ನು ಕೊಲ್ಲಬೇಕೆಂದಿದ್ದೇವೆ!” ಎಂದು ಉತ್ತರಕೊಟ್ಟರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೂದ್ಯರು, “ನಾವು ನಿನ್ನ ಮೇಲೆ ಕಲ್ಲೆಸೆಯುವುದು ಒಳ್ಳೆಯ ಕಾರ್ಯಗಳಿಗಾಗಿ ಅಲ್ಲ, ಆದರೆ ದೇವದೂಷಣೆಗಾಗಿಯೂ ಮತ್ತು ನೀನು ಮನುಷ್ಯನಾಗಿದ್ದು ನಿನ್ನನ್ನು ನೀನೇ ದೇವರನ್ನಾಗಿ ಮಾಡಿಕೊಳ್ಳುವುದಕ್ಕಾಗಿಯೂ ನಾವು ನಿನ್ನ ಮೇಲೆ ಕಲ್ಲೆಸೆಯುತ್ತೇವೆ” ಎಂದು ಉತ್ತರ ಕೊಟ್ಟರು.
Kannada BSI Bible 2016
ಅದಕ್ಕೆ ಯೆಹೂದ್ಯರು ಪ್ರತ್ಯುತ್ತರವಾಗಿ ಆತನಿಗೆ--ಒಳ್ಳೇ ಕಾರ್ಯಗಳಿಗೋಸ್ಕರವಲ್ಲ, ದೇವದೂಷಣೆಗೋಸ್ಕ ರವೂ ನೀನು ಮನುಷ್ಯನಾಗಿದ್ದು ನಿನ್ನನ್ನು ನೀನೇ ದೇವರಾಗಿ ಮಾಡಿಕೊಳ್ಳುವದಕ್ಕೊಸ್ಕರವೂ ನಾವು ನಿನ್ನ ಮೇಲೆ ಕಲ್ಲೆಸೆಯುತ್ತೇವೆ ಅಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೂದ್ಯರು - ನಾವು ನಿನ್ನ ಮೇಲೆ ಕಲ್ಲೆಸೆಯುವದು ಒಳ್ಳೇ ಕಾರ್ಯದ ದೆಸೆಯಿಂದಲ್ಲ, ದೇವದೂಷಣೆಯ ದೆಸೆಯಿಂದಲೂ ನೀನು ಮನುಷ್ಯನಾಗಿದ್ದು ನಿನ್ನನ್ನು ನೀನೇ ದೇವರನ್ನಾಗಿ ಮಾಡಿಕೊಳ್ಳುವದರ ದೆಸೆಯಿಂದಲೂ ನಿನ್ನ ಮೇಲೆ ಕಲ್ಲೆಸೆಯುತ್ತೇವೆ ಅಂದರು.
Kannada Bible (KNCL) BSI 2016
ಅದಕ್ಕೆ ಯೆಹೂದ್ಯರು, “ನಿನ್ನ ಮೇಲೆ ಕಲ್ಲೆಸೆಯುವುದು ಸತ್ಕಾರ್ಯಕ್ಕಾಗಿ ಅಲ್ಲ, ದೇವದೂಷಣೆಗಾಗಿ. ನೀನು ಮನುಷ್ಯ ಮಾತ್ರನು; ಆದರೂ ನಿನ್ನನ್ನೇ ದೇವರನ್ನಾಗಿ ಮಾಡಿಕೊಳ್ಳುತ್ತಿದ್ದೀಯೇ,” ಎಂದು ಉತ್ತರಕೊಟ್ಟರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದಕ್ಕೆ ಯೆಹೂದ್ಯರು ಯೇಸುವಿಗೆ, “ಒಳ್ಳೆಯ ಕಾರ್ಯಗಳಿಗಾಗಿಯಲ್ಲ. ನೀನು ಮನುಷ್ಯನಾಗಿದ್ದು ನಿನ್ನನ್ನೇ ದೇವರನ್ನಾಗಿ ಮಾಡಿಕೊಂಡದ್ದಕ್ಕೂ ದೇವದೂಷಣೆ ಮಾಡುತ್ತಿರುವದಕ್ಕೂ ನಾವು ನಿನ್ನ ಮೇಲೆ ಕಲ್ಲೆಸೆಯುತ್ತೇವೆ,” ಎಂದು ಉತ್ತರಕೊಟ್ಟರು.