John 10:38 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ನನ್ನ ತಂದೆಯು ಮಾಡುವ ಕಾರ್ಯಗಳನ್ನೇ ನಾನು ಮಾಡಿದರೆ, ಆ ಕಾರ್ಯಗಳಲ್ಲಿ ನೀವು ನಂಬಿಕೆ ಇಡಬೇಕು. ನೀವು ನನ್ನಲ್ಲಿ ನಂಬಿಕೆ ಇಡದಿದ್ದರೂ ನನ್ನ ಕಾರ್ಯಗಳಲ್ಲಾದರೂ ನಂಬಿಕೆ ಇಡಿರಿ. ತಂದೆಯು ನನ್ನಲ್ಲಿದ್ದಾನೆ ಮತ್ತು ನಾನು ತಂದೆಯಲ್ಲಿದ್ದೇನೆ ಎಂಬುದನ್ನು ಆಗ ನೀವು ತಿಳಿದುಕೊಳ್ಳುವಿರಿ ಮತ್ತು ಅರ್ಥಮಾಡಿಕೊಳ್ಳುವಿರಿ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ಮಾಡಿದ್ದರಿಂದ ನೀವು ನನ್ನನ್ನು ನಂಬದೆ ಇದ್ದರೂ, ಈ ಕಾರ್ಯಗಳನ್ನಾದರೂ ನಂಬಿರಿ. ಆಗ ನನ್ನಲ್ಲಿ ತಂದೆಯು ಇದ್ದಾನೆಂತಲೂ, ತಂದೆಯಲ್ಲಿ ನಾನು ಇದ್ದೇನೆಂತಲೂ ನಿಮಗೆ ತಿಳಿಯುವುದು ಮತ್ತು ಮನದಟ್ಟಾಗುವುದು” ಎಂದನು.
Kannada BSI Bible 2016
ನಾನು ಮಾಡಿ ದರೂ ನೀವು ನನ್ನನ್ನು ನಂಬದಿದ್ದರೆ ತಂದೆಯು ನನ್ನ ಲ್ಲಿಯೂ ನಾನು ಆತನಲ್ಲಿಯೂ ಇರುವದನ್ನು ನೀವು ತಿಳಿದುಕೊಂಡು ನಂಬುವಂತೆ ಈ ಕಾರ್ಯಗಳನ್ನಾ ದರೂ ನಂಬಿರಿ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮಾಡಿದರೆ ನನ್ನ ಮಾತನ್ನು ನಂಬದೆ ಇದ್ದರೂ ಆ ಕ್ರಿಯೆಗಳ ಸಾಕ್ಷಿಯನ್ನಾದರೂ ನಂಬಿರಿ; ಆಗ ನನ್ನಲ್ಲಿ ತಂದೆಯು ಇದ್ದಾನೆಂತಲೂ ತಂದೆಯಲ್ಲಿ ನಾನು ಇದ್ದೇನೆಂತಲೂ ನೀವು ತಿಳುಕೊಂಡು ಮನನಮಾಡಿಕೊಳ್ಳುವಿರಿ ಅಂದನು.
Kannada Bible (KNCL) BSI 2016
ನಾನು ಹಾಗೆ ಮಾಡಿದ್ದೇ ಆದರೆ, ನನ್ನನ್ನು ನಂಬದೆಹೋದರೂ ನನ್ನ ಕಾರ್ಯಗಳನ್ನಾದರೂ ನಂಬಿರಿ. ಆಗ ಪಿತನು ನನ್ನಲ್ಲಿಯೂ ನಾನು ಪಿತನಲ್ಲಿಯೂ ಇರುವುದು ನಿಮಗೆ ಅರಿವಾಗುವುದು ಹಾಗೂ ಮನದಟ್ಟಾಗುವುದು,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ಮಾಡಿದ್ದರಿಂದ ನೀವು ನನ್ನನ್ನು ನಂಬದಿದ್ದರೂ ಈ ಕಾರ್ಯಗಳನ್ನಾದರೂ ನಂಬಿರಿ. ಆಗ ತಂದೆಯು ನನ್ನಲ್ಲಿಯೂ ನಾನು ತಂದೆಯಲ್ಲಿಯೂ ಇರುವುದು ನಿಮಗೆ ಗೊತ್ತಾಗುವುದು ಹಾಗೂ ಮನದಟ್ಟಾಗುವುದು,” ಎಂದರು.