John 10:40 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬಳಿಕ ಯೇಸು ಜೋರ್ಡನ್ ನದಿಯ ಆಚೆಯ ದಡಕ್ಕೆ ಹೋದನು. ಯೋಹಾನನು ಮೊದಲು ದೀಕ್ಷಾಸ್ನಾನ ಕೊಡುತ್ತಿದ್ದ ಸ್ಥಳಕ್ಕೆ ಯೇಸು ಹೋಗಿ ಅಲ್ಲಿ ತಂಗಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಮೇಲೆ ಆತನು ಯೊರ್ದನ್ ಹೊಳೆಯನ್ನು ದಾಟಿ, ಯೋಹಾನನು ಮೊದಲು ದೀಕ್ಷಾಸ್ನಾನ ಮಾಡಿಸುತ್ತಿದ್ದ ಸ್ಥಳಕ್ಕೆ ಹೋಗಿ ಅಲ್ಲಿ ಉಳಿದು ಕೊಂಡನು.
Kannada BSI Bible 2016
ಯೋಹಾನನು ಮೊದಲು ಬಾಪ್ತಿಸ್ಮ ಮಾಡಿಸುತ್ತಿದ್ದ ಸ್ಥಳವಾದ ಯೊರ್ದನಿನ ಆಚೆಗೆ ತಿರಿಗಿಹೋಗಿ ಅಲ್ಲಿ ವಾಸಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಮೇಲೆ ಆತನು ಯೊರ್ದನ್‍ಹೊಳೆಯ ಆಚೆ ಯೋಹಾನನು ಮೊದಲು ಸ್ನಾನಮಾಡಿಸುತ್ತಿದ್ದ ಸ್ಥಳಕ್ಕೆ ತಿರಿಗಿ ಹೋಗಿ ಅಲ್ಲಿ ಇದ್ದನು.
Kannada Bible (KNCL) BSI 2016
ಬಳಿಕ ಯೇಸು ಸ್ವಾಮಿ ಜೋರ್ಡನ್ ನದಿಯನ್ನು ದಾಟಿ ಯೊವಾನ್ನನು ಮೊತ್ತಮೊದಲು ಸ್ನಾನದೀಕ್ಷೆಯನ್ನು ಕೊಡುತ್ತಿದ್ದ ಸ್ಥಳಕ್ಕೆ ಬಂದು ಅಲ್ಲಿ ತಂಗಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಮೇಲೆ ಯೇಸು ಯೊರ್ದನ್ ನದಿಯನ್ನು ದಾಟಿ ಯೋಹಾನನು ಮೊದಲು ದೀಕ್ಷಾಸ್ನಾನ ಮಾಡಿಸುತ್ತಿದ್ದ ಸ್ಥಳಕ್ಕೆ ಬಂದು, ಅಲ್ಲಿಯೇ ವಾಸಮಾಡಿದರು.