John 10:41 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ಅನೇಕ ಜನರು ಆತನ ಬಳಿಗೆ ಬಂದರು. “ಯೋಹಾನನು ಎಂದೂ ಅದ್ಭುತಕಾರ್ಯವನ್ನು ಮಾಡಲಿಲ್ಲ. ಆದರೆ ಯೋಹಾನನು ಈ ಮನುಷ್ಯನ (ಯೇಸುವಿನ) ಬಗ್ಗೆ ಹೇಳಿದ ಪ್ರತಿಯೊಂದೂ ಸತ್ಯವಾದದ್ದು” ಎಂದು ಅವರು ಮಾತಾಡಿಕೊಂಡರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಅನೇಕರು ಆತನ ಬಳಿಗೆ ಬಂದು, “ಯೋಹಾನನು ಒಂದು ಸೂಚಕಕಾರ್ಯವನ್ನೂ ಮಾಡಲಿಲ್ಲ, ಆದರೆ ಈತನ ವಿಷಯವಾಗಿ ಯೋಹಾನನು ಹೇಳಿದ್ದೆಲ್ಲಾ ಸತ್ಯವಾಗಿದೆ” ಎಂದು ಮಾತನಾಡುತ್ತಿದ್ದರು.
Kannada BSI Bible 2016
ಆಗ ಅನೇಕರು ಆತನ ಬಳಿಗೆ ಬಂದು--ಯೋಹಾನನು ಅದ್ಭುತಕಾರ್ಯಗಳನ್ನು ಮಾಡಲಿಲ್ಲ; ಆದರೆ ಈ ಮನುಷ್ಯನ ವಿಷಯವಾಗಿ ಯೋಹಾನನು ಹೇಳಿದ್ದೆಲ್ಲವೂ ನಿಜವಾಗಿದೆ ಅಂದರು.ಅಲ್ಲಿ ಅನೇಕರು ಆತನ ಮೇಲೆ ನಂಬಿಕೆಯಿಟ್ಟರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅನೇಕರು ಆತನ ಬಳಿಗೆ ಬಂದು - ಯೋಹಾನನು ಒಂದು ಸೂಚಕಕಾರ್ಯವನ್ನೂ ಮಾಡಲಿಲ್ಲ; ಆದರೆ ಈತನ ವಿಷಯವಾಗಿ ಯೋಹಾನನು ಹೇಳಿದ್ದೆಲ್ಲಾ ನಿಜವಾಗಿತ್ತು ಎಂದು ಮಾತಾಡುತ್ತಿದ್ದರು.
Kannada Bible (KNCL) BSI 2016
ಹಲವರು ಅವರ ಬಳಿಗೆ ಬರತೊಡಗಿದರು. ‘ಯೊವಾನ್ನನು ಒಂದು ಸೂಚಕಕಾರ್ಯವನ್ನೂ ಮಾಡಲಿಲ್ಲ; ಆದರೆ ಇವರ ವಿಷಯವಾಗಿ ಆತ ಹೇಳಿದ್ದೆಲ್ಲವೂ ನಿಜವಾಗಿದೆ’ ಎಂದು ಆ ಜನರು ಮಾತನಾಡಿಕೊಳ್ಳುತ್ತಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಅನೇಕರು ಯೇಸುವಿನ ಬಳಿಗೆ ಬಂದು, “ಯೋಹಾನನು ಯಾವುದೇ ಸೂಚಕಕಾರ್ಯವನ್ನು ಮಾಡಲಿಲ್ಲ. ಆದರೆ ಇವರ ವಿಷಯವಾಗಿ ಯೋಹಾನನು ಹೇಳಿದ್ದೆಲ್ಲವೂ ಸತ್ಯವಾಗಿದೆ,” ಎಂದರು.