John 10:5 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ಕುರಿಗಳು ತಮಗೆ ಗೊತ್ತಿಲ್ಲದ ವ್ಯಕ್ತಿಯನ್ನು ಎಂದಿಗೂ ಹಿಂಬಾಲಿಸುವುದಿಲ್ಲ. ಅವುಗಳು ಆ ವ್ಯಕ್ತಿಯ ಬಳಿಯಿಂದ ಓಡಿಹೋಗುತ್ತವೆ. ಏಕೆಂದರೆ ಅವುಗಳು ಅವನ ಸ್ವರವನ್ನು ತಿಳಿದಿಲ್ಲ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಅವು ಅಪರಿಚಿತನನ್ನು ಹಿಂಬಾಲಿಸದೇ ಅವನ ಬಳಿಯಿಂದ ಓಡಿಹೋಗುವುದಿಲ್ಲ. ಏಕೆಂದರೆ ಅವು ಅಪರಿಚಿತರ ಸ್ವರವನ್ನು ಗುರುತಿಸುವುದಿಲ್ಲ” ಎಂದು ನಿಮಗೆ ಹೇಳುತ್ತೇನೆ.
Kannada BSI Bible 2016
ಅವು ಅನ್ಯನನ್ನು ಹಿಂಬಾಲಿಸದೆ ಅವನ ಬಳಿಯಿಂದ ಓಡಿ ಹೋಗುವವು; ಅವು ಅನ್ಯರ ಸ್ವರವನ್ನು ತಿಳಿಯುವದಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವು ಅನ್ಯರ ಸ್ವರವನ್ನು ತಿಳಿಯುವದಿಲ್ಲ; ಅನ್ಯನ ಹಿಂದೆ ಹೋಗದೆ ಅವನ ಬಳಿಯಿಂದ ಓಡಿಹೋಗುತ್ತವೆ.
Kannada Bible (KNCL) BSI 2016
ಅಪರಿಚಿತನನ್ನು ಅವು ಹಿಂಬಾಲಿಸುವುದಿಲ್ಲ; ಅವನಿಂದ ದೂರ ಓಡಿಹೋಗುತ್ತವೆ. ಅಪರಿಚಿತರ ಸ್ವರವನ್ನು ಅವು ಗುರುತಿಸುವುದಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಅವು ಅಪರಿಚಿತನನ್ನು ಹಿಂಬಾಲಿಸದೇ ಅವನ ಬಳಿಯಿಂದ ಓಡಿಹೋಗುವವು. ಏಕೆಂದರೆ ಅವು ಅಪರಿಚಿತನ ಸ್ವರವನ್ನು ಗುರುತಿಸುವುದಿಲ್ಲ,” ಎಂದರು.