John 11:13 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಲಾಜರನು ಸತ್ತುಹೋಗಿದ್ದಾನೆ. ಎಂಬರ್ಥದಲ್ಲಿ ಯೇಸು ಹೇಳಿದನು. ಆದರೆ ಲಾಜರನು ನಿಜವಾಗಿಯೂ ನಿದ್ರಿಸುತ್ತಿದ್ದಾನೆ ಎಂಬರ್ಥದಲ್ಲಿ ಯೇಸು ಹೇಳಿದನೆಂಬುದಾಗಿ ಶಿಷ್ಯರು ಭಾವಿಸಿಕೊಂಡರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೇಸು ಅವನ ಮರಣವನ್ನು ಕುರಿತು ಅದನ್ನು ಹೇಳಿದ್ದನು, ಆದರೆ ಅವರು ವಿಶ್ರಾಂತಿಗಾಗಿ ಮಲಗಿದ್ದಾನೆಂಬುದಾಗಿ ಹೇಳಿದನೆಂದು ಯೋಚಿಸಿದರು.
Kannada BSI Bible 2016
ಆದರೆ ಯೇಸು ಅವನ ಮರಣದ ವಿಷಯವಾಗಿ ಹೇಳಿದ್ದನು; ಆದರೆ ಅವರು ನಿದ್ರೆಯಲ್ಲಿಯ ವಿಶ್ರಾಂತಿ ಕುರಿತು ಆತನು ಹೇಳಿದ ನೆಂದು ಯೋಚಿಸಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೇಸು ಅವನ ಮರಣವನ್ನು ಸೂಚಿಸಿ ಅದನ್ನು ಹೇಳಿದ್ದನು; ಆದರೆ ಅವರು ನಿದ್ರೆಯ ವಿಶ್ರಾಂತಿಯನ್ನು ಕುರಿತು ಹೇಳುತ್ತಾನೆಂದು ನೆನಸಿದರು.
Kannada Bible (KNCL) BSI 2016
ಯೇಸು ಹೇಳಿದ್ದು ಅವನ ಮರಣವನ್ನು ಕುರಿತು. ಶಿಷ್ಯರಾದರೋ ಅದು ಸಾಮಾನ್ಯ ನಿದ್ರೆಯೆಂದು ತಿಳಿದುಕೊಂಡರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಅವನ ಮರಣವನ್ನು ಕುರಿತು ಹೇಳಿದ್ದರು. ಆದರೆ ಶಿಷ್ಯರು ನಿದ್ರೆಯ ವಿಶ್ರಾಂತಿಯನ್ನು ಕುರಿತು ಯೇಸು ಹೇಳಿದರೆಂದು ಯೋಚಿಸಿದರು.