John 11:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಪ್ರಭುವಿಗೆ (ಯೇಸುವಿಗೆ) ಪರಿಮಳತೈಲವನ್ನು ಹಚ್ಚಿ ಆತನ ಪಾದಗಳನ್ನು ತನ್ನ ತಲೆಕೂದಲಿನಿಂದ ಒರಸಿದವಳೇ ಈ ಮರಿಯಳು. ಅಸ್ವಸ್ಥನಾಗಿದ್ದ ಲಾಜರನು ಮರಿಯಳ ಸಹೋದರನಾಗಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಈ ಮರಿಯಳು ಕರ್ತನಿಗೆ ತೈಲವನ್ನು ಹಚ್ಚಿ ಆತನ ಪಾದಗಳನ್ನು ತನ್ನ ತಲೆ ಕೂದಲಿನಿಂದ ಒರಸಿದವಳು. ಈಕೆಯ ಸಹೋದರನಾದ ಲಾಜರನೇ ಅಸ್ವಸ್ಥನಾಗಿದ್ದನು.
Kannada BSI Bible 2016
(ಕರ್ತನಿಗೆ ತೈಲವನ್ನು ಹಚ್ಚಿ ತನ್ನ ತಲೇಕೂದಲಿನಿಂದ ಆತನ ಪಾದಗಳನ್ನು ಒರಸಿದ ಈ ಮರಿಯಳ ಸಹೋ ದರನಾದ ಲಾಜರನು ಅಸ್ವಸ್ಥನಾಗಿದ್ದನು).
Kannada BSI JV (ಕನ್ನಡ ಸತ್ಯವೇದವು J.V. (BSI))
ಈ ಮರಿಯಳು ಯೇಸುಸ್ವಾವಿುಗೆ ತೈಲವನ್ನು ಹಚ್ಚಿ ಆತನ ಪಾದಗಳನ್ನು ತನ್ನ ತಲೇಕೂದಲಿನಿಂದ ಒರಸಿದವಳು. ಈಕೆಯ ತಮ್ಮನಾದ ಲಾಜರನೇ ಅಸ್ವಸ್ಥನಾಗಿದ್ದನು.
Kannada Bible (KNCL) BSI 2016
ಹಿಂದೊಮ್ಮೆ ಪ್ರಭುವಿನ ಪಾದಗಳಿಗೆ ಸುಗಂಧ ತೈಲವನ್ನು ಹಚ್ಚಿ ಅವರ ಪಾದಗಳನ್ನು ತನ್ನ ತಲೆಗೂದಲಿನಿಂದ ಒರಸಿದವಳೇ ಈ ಮರಿಯ. ಅಸ್ವಸ್ಥನಾಗಿದ್ದ ಲಾಸರನು ಇವಳ ಸಹೋದರ.)
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸುಸ್ವಾಮಿಯ ಪಾದಗಳಿಗೆ ತೈಲವನ್ನು ಹಚ್ಚಿ ತನ್ನ ತಲೆಕೂದಲಿನಿಂದ ಅವರ ಪಾದಗಳನ್ನು ಒರಸಿದ ಮರಿಯಳ ಸಹೋದರನಾದ ಲಾಜರನೇ ಅಸ್ವಸ್ಥನಾಗಿದ್ದನು.